ಹೆಬ್ರಿ: ಪೆಟ್ರೋಲ್ ಬಂಕ್‌ನಲ್ಲಿ ಮಲಗಿದ್ದ ಕಾರ್ಮಿಕನ ಮೇಲೆ ಟಿಪ್ಪರ್‌ ಹರಿದು ಮೃತ್ಯು

ಉಡುಪಿ, ನ 25: ಹೆಬ್ರಿಯಲ್ಲಿ ಪೆಟ್ರೋಲ್‌ ಬಂಕ್‌ನಲ್ಲಿ ಮಲಗಿದ್ದ ಕಾರ್ಮಿಕರೊಬ್ಬರ ಮೇಲೆ ಟಿಪ್ಪರ್‌ ಲಾರಿ ಹರಿದು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.

ಇಲ್ಲಿನ ಸೋಮೇಶ್ವರ ಪೆಟ್ರೋಲ್‌ ಬಂಕ್‌ನಲ್ಲಿ ಮಲಗಿದ್ದ ಶಿವಮೊಗ್ಗ ಮೂಲದ ಶಿವರಾಜ್ (38) ಟಿಪ್ಪರ್ ಹರಿದ ಪರಿಣಾಮ ಸಾವನ್ನಪ್ಪಿದ ಕಾರ್ಮಿಕ. ಇವರು ಸಾಗರ ತಾಲೂಕಿನ ಕೊರ್ಲಿ ಕೊಪ್ಪದ ನಿವಾಸಿಯಾಗಿದ್ದರು.

ನಿನ್ನೆ ಮುಂಜಾನೆ ಬಂಕ್‌ಗೆ ಇಂಧನ ತುಂಬಿಸಲು ಬಂದಿದ್ದ ಟಿಪ್ಪರ್‌ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಈ ದುರ್ಘಟನೆ ನಡೆದಿದೆ. ಶಿವರಾಜ್ ಹಾಗೂ ಮಹೇಂದ್ರ ಎಂಬವರು ಪೆಟ್ರೋಲ್ ಪಂಪ್ ಬಳಿ ತಮ್ಮ ವಾಹನವನ್ನು ಬದಿಗಿಟ್ಟು ಮಲಗಿದ್ದರು. ಈ ವೇಳೆ ಪೆಟ್ರೋಲ್ ಹಾಕಿಸಿ ನಿರ್ಗಮಿಸುತ್ತಿದ್ದ ಟಿಪ್ಪರ್ ಅವರ ಮೇಲೆ ಹರಿದಿದೆ.

ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Scroll to Top