ಅಕ್ಕಪಕ್ಕ ಮನೆಯ ಯುವಕ-ಯುವತಿ ಒಂದೇ ದಿನ ನಾಪತ್ತೆ..!

ಬಂಟ್ವಾಳ : ಅಕ್ಕ ಪಕ್ಕದ ಮನೆಯ ಯುವಕ ಮತ್ತು ಯುವತಿ ಒಂದೇ ದಿನ ನಾಪತ್ತೆ ಯಾದ ಘಟನೆ ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಗ್ರಾಮದಲ್ಲಿ ನಡೆದಿದ್ದು, ಈ ಕುರಿತಂತೆ ಎರಡೂ ಮನೆಯವರು ಬಂಟ್ವಾಳ ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಸಜೀಪಮುನ್ನೂರು ಗ್ರಾಮದ ಉದ್ದೊಟ್ಟು ನಿವಾಸಿ ಆಯಿಷತ್‌ ರಸ್ಮಾ (18) ಮತ್ತು ಮಹಮ್ಮದ್‌ ಸಿನಾನ್‌ (23) ನಾಪತ್ತೆಯಾದವರು.

ರಸ್ಮಾ ನಡುಪದವು ಖಾಸಗಿ ಕಾಲೇಜಿನಲ್ಲಿ ಫಾರ್ಮಸಿ ವಿದ್ಯಾರ್ಥಿನಿಯಾಗಿದ್ದಾರೆ. ಅವರು ನ. 23ರ ರಾತ್ರಿ ಊಟ ಮುಗಿಸಿ ಮನೆಯಲ್ಲಿ ಮಲಗಿದ್ದು, ಮರುದಿನ ಬೆಳಗ್ಗೆ ಎದ್ದು ನೋಡಿದಾಗ ನಾಪತ್ತೆಯಾಗಿದ್ದರು. ಸಿನಾನ್‌ ಕೆಲವು ವರ್ಷಗಳ ಕಾಲ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ಬಳಿಕ ಊರಿಗೆ ಬಂದು ಕೂಲಿ ಕೆಲಸ ಮಾಡಿಕೊಂಡಿದ್ದರು.

ಅವರು ನ. 23ರ ರಾತ್ರಿ ಊಟ ಮಾಡಿ ಮಲಗಿದವರು ಮರುದಿನ ಬೆಳಗಾಗುವಷ್ಟರಲ್ಲಿ ನಾಪತ್ತೆಯಾಗಿದ್ದಾರೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಪೊಲೀಸರು ಎರಡೂ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

You cannot copy content from Baravanige News

Scroll to Top