ವಾರಾಣಸಿ : ಜ್ಞಾನವಾಪಿ ಮಸೀದಿ ಆವರಣದ ವೈಜ್ಞಾನಿಕ ಸಮೀಕ್ಷಾ ವರದಿಯನ್ನು ಸಲ್ಲಿಸಲು ಮೂರು ವಾರಗಳ ಸಮಯಾವಕಾಶ ನೀಡುವಂತೆ ವಾರಾಣಸಿಯ ಜಿಲ್ಲಾ ನ್ಯಾಯಾಲಯವನ್ನು ಭಾರತೀಯ ಪುರಾತತ್ವ ಸಮೀಕ್ಷಾ ಇಲಾಖೆ (ಎಎಸ್‌ಐ)ಯು ಕೋರಿದೆ.
ಜ್ಞಾನವಾಪಿ ಮಸೀದಿ ಆವರಣದ ವೈಜ್ಞಾನಿಕ ಸಮೀಕ್ಷಾ ವರದಿಯನ್ನು ನವೆಂಬರ್ 28ರೊಳಗೆ ಸಲ್ಲಿಸುವಂತೆ ನ್ಯಾಯಾಲಯವು ಇಲಾಖೆಗೆ ಸೂಚಿಸಿತ್ತು. ಹಾಗಾಗಿ ಇಲಾಖೆಯು ಮೂರು ವಾರಗಳ ವಿಸ್ತರಣೆ ಕೋರಿದೆ.
ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷಾ ವರದಿ ಸಲ್ಲಿಕೆಗೆ ಸಮಯ ಕೋರಿದ ಎಎಸ್‌ಐ
