ಡಿ.1 ರಿಂದ ಬೇಕಾಬಿಟ್ಟಿ ಸಿಮ್ ಖರೀದಿಗೆ ಬೀಳಲಿದೆ ಬ್ರೇಕ್

ನವದೆಹಲಿ, ನ 29: ಐಡಿ ಬಳಸಿಕೊಂಡು ಸಿಮ್ ಖರೀದಿಸಿ ಕಾನೂನು ಬಾಹಿರ ಚಟುವಟಿಕೆಗಳಿಗೆ ದಾರಿ ಮಾಡಿಕೊಡುತ್ತಿದ್ದ ಡೀಲರ್‌ಗಳಿಗೆ ಬಿಸಿ ಮುಟ್ಟಿಸಲು ಜೊತೆಗೆ ಹೆಚ್ಚುತ್ತಿರುವ ಸೈಬರ್ ಕ್ರೈಂ ಮತ್ತು ದೇಶವಿರೋಧಿ ಕೃತ್ಯಗಳಿಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.

ಡಿ.1 ರಿಂದ ಸಿಮ್ ಮಾರಾಟದ ನಿಯಮಗಳಲ್ಲಿ ಬದಲಾವಣೆಯಾಗಲಿದ್ದು, ಇದರ ಅಡಿಯಲ್ಲಿ, ಸಿಮ್‌ಗಳನ್ನು ಮಾರಾಟ ಮಾಡುವ ಎಲ್ಲಾ ಡೀಲರ್‌ಗಳು ಪರಿಶೀಲನೆಯನ್ನು ಹೊಂದಿರುವುದು ಕಡ್ಡಾಯವಾಗಿರುತ್ತದೆ. ಅಷ್ಟೇ ಅಲ್ಲದೆ ಡೀಲರ್‌ಗಳು ಸಿಮ್‌ಗಳನ್ನು ಮಾರಾಟ ಮಾಡಲು ನೋಂದಾಯಿಸಿಕೊಳ್ಳುವುದು ಕಡ್ಡಾಯವಾಗಿದೆ.

ನಿಯಮವನ್ನು ಪಾಲಿಸದೇ ಉಲ್ಲಂಘನೆ ಮಾಡಿದರೆ 10 ಲಕ್ಷ ರೂ. ದಂಡ. ಗಂಭೀರ ಪ್ರಕರಣವಾದಲ್ಲಿ ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತದೆ ಎಂದು ವರದಿಯಾಗಿದೆ.

ಈ ನಿಯಮದ ಪ್ರಕಾರ ವ್ಯಾಪಾರಸ್ಥರು ಹಾಗೂ ಕಂಪನಿಗಳಿಗೆ ಮಾತ್ರ ಸಿಮ್ ಕಾರ್ಡ್‌ಗಳನ್ನು ದೊಡ್ಡ ಪ್ರಮಾಣದಲ್ಲಿ ಖರೀದಿಸಲು ಅನುಮತಿ ನೀಡಲಾಗಿದೆ. ಸಾಮಾನ್ಯ ಬಳಕೆದಾರರು ಒಂದು ಗುರುತಿನಿಂದ ಗರಿಷ್ಠ 9 ಸಿಮ್‌ಗಳನ್ನು ಮಾತ್ರ ಪಡೆಯಲು ಅವಕಾಶವಿದೆ.

Scroll to Top