Monday, July 15, 2024
Homeಸುದ್ದಿಇಂದು ಪ್ರಾಂಜಲ್ ಕುಟುಂಬಕ್ಕೆ ₹50 ಲಕ್ಷ ಪರಿಹಾರ ಚೆಕ್ ಹಸ್ತಾಂತರ; ಸಿಎಂ

ಇಂದು ಪ್ರಾಂಜಲ್ ಕುಟುಂಬಕ್ಕೆ ₹50 ಲಕ್ಷ ಪರಿಹಾರ ಚೆಕ್ ಹಸ್ತಾಂತರ; ಸಿಎಂ

ಬೆಂಗಳೂರು, ಡಿ. 05: ಜಮ್ಮು ಕಾಶ್ಮೀರದಲ್ಲಿ ನಡೆದ ಉಗ್ರರೊಂದಿಗಿನ ಕಾಳಗದಲ್ಲಿ ಹುತಾತ್ಮರಾಗಿರುವ ನಮ್ಮ ಹೆಮ್ಮೆಯ ಯೋಧ ಕ್ಯಾಪ್ಟನ್‌ ಪ್ರಾಂಜಲ್‌ ಅವರ ಕುಟುಂಬಕ್ಕೆ ₹50,00,000 (ಐವತ್ತು ಲಕ್ಷ ) ಪರಿಹಾರಧನವನ್ನು ನಮ್ಮ ಸರ್ಕಾರದಿಂದ ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಅವರ ಕಚೇರಿ ಎಕ್ಸ್ ನಲ್ಲಿ ಮಾಡಿರುವ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.

ದೇಶ ರಕ್ಷಣೆಗಾಗಿ ಪ್ರಾಣ ಪಣಕ್ಕಿಟ್ಟು ಶ್ರಮಿಸುವ ಪ್ರತಿಯೊಬ್ಬ ಯೋಧನ ಬಗ್ಗೆ ನಮಗೆ ಅಪಾರ ಗೌರವವಿದೆ. ಹುತಾತ್ಮ ಯೋಧ ಪ್ರಾಂಜಲ್ ಅವರ ತ್ಯಾಗ, ಬಲಿದಾನಕ್ಕೆ ಬೆಲೆಕಟ್ಟಲಾಗದು, ಆದರೆ ದೇಶದ ಕೋಟ್ಯಂತರ ಜನರ ಪರವಾಗಿ ಈ ಹೊತ್ತಿನಲ್ಲಿ ಅವರ ಕುಟುಂಬದ ಜೊತೆ ನಿಲ್ಲಬೇಕಾದುದ್ದು ನಮ್ಮ ಕರ್ತವ್ಯವೆಂದು ಭಾವಿಸಿದ್ದೇವೆ.

ಪರಿಹಾರಧನದ ಚೆಕ್ ಅನ್ನು ಸಿದ್ಧಪಡಿಸಲಾಗಿದ್ದು ನಾಳೆ ಮೃತ ಯೋಧನ ಕುಟುಂಬಕ್ಕೆ ಹಸ್ತಾಂತರಿಸಲಾಗುವುದು ಎಂದು ಸೋಮವಾರ ರಾತ್ರಿ ಮಾಡಿರುವ ಪೋಸ್ಟ್ ನಲ್ಲಿ ತಿಳಿಸಿದ್ದಾರೆ. ಮತ್ತೊಮ್ಮೆ ಕ್ಯಾಪ್ಟನ್ ಪ್ರಾಂಜಲ್ ಅವರ ಅನನ್ಯ ದೇಶಸೇವೆ, ಸಮರ್ಪಣಾಭಾವವನ್ನು ಗೌರವದಿಂದ ಸ್ಮರಿಸುತ್ತಾ, ಗೌರವ ನಮನ ಸಲ್ಲಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News