ಉಡುಪಿ: ನಾಲ್ವರ ಕೊಲೆ ಪ್ರಕರಣ: ಆರೋಪಿಗೆ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ಉಡುಪಿ, ಡಿ.06: ನೇಜಾರಿನಲ್ಲಿ ನಡೆದ ನಾಲ್ವರ ಕೊಲೆ ಪ್ರಕರಣದ ಆರೋಪಿ ಪ್ರವೀಣ್‌ ಚೌಗಲೆಯನ್ನು ಮಂಗಳವಾರ ನ್ಯಾಯಾಧೀಶರ ಎದುರು ವೀಡಿಯೋ ಕಾನ್ಫರೆನ್ಸ್‌ ಮೂಲಕ ಹಾಜರುಪಡಿಸಲಾಯಿತು.

ವಿಚಾರಣೆ ಪ್ರಕ್ರಿಯೆ ನಡೆಸಿದ ನ್ಯಾಯಾಧೀಶೆ ಅವರು ಆರೋಪಿಯ ನ್ಯಾಯಾಂಗ ಬಂಧನವನ್ನು ಡಿ.18ರ ವರೆಗೆ ವಿಸ್ತರಿಸಿ ಆದೇಶಿಸಿದರು.

ಅಂದು ಮತ್ತೂಮ್ಮೆ ಆತನನ್ನು ವೀಡಿಯೋ ಕಾನ್ಫರೆನ್ಸ್‌ ಮೂಲಕ ನ್ಯಾಯಾಧೀಶರ ಎದುರು ಹಾಜರು ಪಡಿಸಲಾಗುತ್ತದೆ. ಚಾರ್ಜ್‌ಶೀಟ್‌ ಸಲ್ಲಿಕೆ ಸಂದರ್ಭ ಆತನನ್ನು ಮುಖತಃ ಕೋರ್ಟ್‌ಗೆ ಹಾಜರುಪಡಿಸುವ ಸಾಧ್ಯತೆಗಳಿವೆ.

ನ.22ರಿಂದ ಡಿ. 5ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದ ಆತನನ್ನು ಹಿರಿಯಡಕದ ಜಿಲ್ಲಾ ಕಾರಾಗೃಹದಲ್ಲಿ ಪ್ರತ್ಯೇಕ ಸೆಲ್‌ನಲ್ಲಿ ಇರಿಸಲಾಗಿತ್ತು. ಬಳಿಕ ಹೆಚ್ಚಿನ ಭದ್ರತೆ ಒದಗಿಸುವ ದೃಷ್ಟಿಯಿಂದ ನ. 27ರಂದು ಬೆಂಗಳೂರಿನ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿತ್ತು.

You cannot copy content from Baravanige News

Scroll to Top