ಉಡುಪಿ: ನೇಜಾರು ಹತ್ಯೆ ಪ್ರಕರಣ: ಆರೋಪಿ ಪ್ರವೀಣ್ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆ

ಉಡುಪಿ: ನೇಜಾರು ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣದ ಬಂಧಿತ ಆರೋಪಿ ಪ್ರವೀಣ್ ಅರುಣ್ ಚೌಗುಲೆ(39)ಯ ನ್ಯಾಯಾಂಗ ಬಂಧನ ಅವಧಿಯನ್ನು ಡಿ.30ರವರೆಗೆ ವಿಸ್ತರಿಸಿ ಉಡುಪಿಯ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಇಂದು ಆದೇಶಿಸಿದೆ.

ಡಿ.5ರಂದು ನ್ಯಾಯಾಲಯವು ಆರೋಪಿಯ ನ್ಯಾಯಾಂಗ ಬಂಧನವನ್ನು ಡಿ.18ರವರೆಗೆ ವಿಸ್ತರಿಸಿದ್ದು, ಇಂದಿಗೆ ನ್ಯಾಯಾಂಗ ಬಂಧನ ಅವಧಿ ಮುಗಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಆರೋಪಿಯನ್ನು ವಿಡಿಯೋ ಕಾನ್ಸರೆನ್ಸ್ ಮೂಲಕ ನ್ಯಾಯಾಧೀಶೆ ದೀಪಾ ಅವರ ಮುಂದೆ ಹಾಜರುಪಡಿಸಲಾಯಿತು.

ನ್ಯಾಯಾಧೀಶರು ಆರೋಪಿಯ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ ವಿಸ್ತರಿಸಿ, ಡಿ.30ಕ್ಕೆ ಹಾಜರುಪಡಿಸುವಂತೆ ಆದೇಶ ನೀಡಿದರು. ಈ ಸಂದರ್ಭ ದಲ್ಲಿ ಹಿರಿಯ ಸಹಾಯಕ ಸರಕಾರಿ ಅಭಿಯೋಜಕ ಎಚ್.ಎಂ.ನದಾಫ್ ಹಾಜರಿದ್ದರು.

You cannot copy content from Baravanige News

Scroll to Top