ಉಡುಪಿ : ದಕ್ಷಿಣ ಭಾರತದ ಹೆಸರಾಂತ ನಟಿ ಸಾಯಿ ಪಲ್ಲವಿ ಅವರು ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದರು.
ನಟಿ ಸಾಯಿ ಪಲ್ಲವಿ ಖಾಸಗಿ ಕಾರ್ಯದ ನಿಮಿತ್ತ ಉಡುಪಿಗೆ ಬಂದಿರುವ ಅವರು, ಕನಕ ನವಗ್ರಹ ಕಿಂಡಿಯ ಮೂಲಕ ಕೃಷ್ಣ ದೇವರ ದರ್ಶನ ಪಡೆದರು.
ಈ ವೇಳೆ ರಥಬೀದಿಯಲ್ಲಿರುವ ಕಾಣಿಯೂರು ಮಠಕ್ಕೆ ತೆರಳಿ ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದರು. ಮಠಕ್ಕೆ ಭೇಟಿ ನೀಡಿದ ಸಾಯಿ ಪಲ್ಲವಿ ಅವರನ್ನು ಶ್ರೀ ಕೃಷ್ಣ ಮಠದ ವತಿಯಿಂದ ಗೌರವಿಸಲಾಯಿತು.
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಖ್ಯಾತ ನಟಿ ಸಾಯಿ ಪಲ್ಲವಿ ಭೇಟಿ
