Sunday, September 8, 2024
Homeಸುದ್ದಿರಾಜ್ಯ'ಯುವನಿಧಿ ಯೋಜನೆ’ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

‘ಯುವನಿಧಿ ಯೋಜನೆ’ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಸರ್ಕಾರದ 5ನೇ ಗ್ಯಾರಂಟಿ‌ ‘ಯುವನಿಧಿ ಯೋಜನೆ’ ನೋಂದಣಿ ಪ್ರಕ್ರಿಯೆಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೊದಲು ಸಿಎಂ ಮತ್ತು ಗಣ್ಯರು, ಓರ್ವ ಯುವತಿ ಹಾಗೂ ಯುವಕನನ್ನ ವೇದಿಕೆ ಮೇಲೆ ಕರೆಸಿ ಜ್ಯೋತಿ ಬೆಳಗುವ ಮೂಲಕ ಚಾಲನೆ ನೀಡಿದರು.

ಸಿಎಂ ಹಾಗೂ ಡಿಸಿಎಂ ಯುವನಿಧಿ ಯೋಜನೆ ಪೋಸ್ಟರ್ ಬಿಡುಗಡೆ ಮಾಡಿದರು. ಇದೇ ವೇಳೆ ಸಿಎಂ ಅವರು ಯುವನಿಧಿ ಯೋಜನೆಯ ಲೋಗೋ ಬಿಡುಗಡೆ ಮಾಡಿದರು. ಯುವನಿಧಿ ಯೋಜನೆ ನೋಂದಣಿ ಪ್ರಕ್ರಿಯೆಗೆ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿವಕುಮಾರ್, ಸಚಿವರಾದ ಶರಣು ಪ್ರಕಾಶ್ ಪಾಟೀಲ್, ಸುಧಾಕರ್, ನಾಗೇಂದ್ರ, ಪ್ರಿಯಾಂಕ್ ಖರ್ಗೆ ಸೇರಿ ಹಲವರು ಭಾಗಿಯಾಗಿದ್ದರು.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News