Sunday, September 8, 2024
Homeಸುದ್ದಿರಾಷ್ಟ್ರೀಯತಮಿಳು ಹಿರಿಯ ನಟ, ರಾಜಕಾರಣಿ ಕ್ಯಾಪ್ಟನ್ ವಿಜಯ್ ಕಾಂತ್ ನಿಧನ

ತಮಿಳು ಹಿರಿಯ ನಟ, ರಾಜಕಾರಣಿ ಕ್ಯಾಪ್ಟನ್ ವಿಜಯ್ ಕಾಂತ್ ನಿಧನ

ಚೆನ್ನೈ : ನಟ ಹಾಗೂ ದೇಸಿಯಾ ಮುರ್ಪೊಕ್ಕು ದ್ರಾವಿಡಾ ಕಝಾಗಮ್ (DMDK) ಅಧ್ಯಕ್ಷ ಕ್ಯಾಪ್ಟನ್ ವಿಜಯ್ ಕಾಂತ್ (71) ಇಂದು ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.

ಸಿನಿಮಾ ಆ್ಯಕ್ಟರ್ ಹಾಗೂ ರಾಜಕಾರಣಿ ಆಗಿದ್ದ ವಿಜಯ್ ಕಾಂತ್ ಅವರಿಗೆ ಇತ್ತೀಚೆಗೆ ಕೋವಿಡ್ ಇರುವುದು ದೃಢಪಟ್ಟಿತ್ತು.

ಈ ಹಿನ್ನೆಲೆಯಲ್ಲಿ ಚೆನ್ನೈನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇದರ ಜೊತೆಗೆ ಇವರು ದೀರ್ಘಕಾಲದಿಂದ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಹೀಗಾಗಿ ಆಸ್ಪತ್ರೆಯಲ್ಲಿ ವಿಜಯ್ ಕಾಂತ್ ಅವರಿಗೆ ವೆಂಟಿಲೇಟರ್ ಅನ್ನು ಅಳವಡಿಸಲಾಗಿತ್ತಾದರೂ ಇಂದು ಬೆಳಗ್ಗೆ ನಿಧನ ಹೊಂದಿದ್ದಾರೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News