ಬೆಂಗಳೂರು : ಬಿಬಿಎ ವ್ಯಾಸಂಗ ಮಾಡುತ್ತಿದ್ದ 21 ವರ್ಷದ ವಿದ್ಯಾರ್ಥಿನಿ ನೇಣಿಗೆ ಶರಣಾಗಿರೋ ಘಟನೆ ಸುಧಾಮನಗರದಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿನಿಯನ್ನು ವರ್ಷಿಣಿ ಎಂದು ಗುರುತಿಸಲಾಗಿದೆ. ವರ್ಷಿಣಿ ಜಯನಗರದ ಕಮ್ಯೂನಿಟಿ ಕಾಲೇಜಿನಲ್ಲಿ ಓದುತ್ತಿದ್ದಳು.
ಸುಧಾಮನಗರದಲ್ಲಿ ಕುಟುಂಬದೊಂದಿಗೆ ವಾಸವಿದ್ದ ಯುವತಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದೆ.
ಸದ್ಯ ವಿದ್ಯಾರ್ಥಿನಿಯ ಸಾವಿಗೆ ಕಾರಣ ಏನು ಅನ್ನೋದು ತಿಳಿದು ಬಂದಿಲ್ಲ. ಯುವತಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಿಬಿಎ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ..!
![](https://www.baravanige.com/wp-content/uploads/2024/01/IMG-20240101-WA0029.jpg)