Sunday, September 8, 2024
Homeಸುದ್ದಿಉಡುಪಿ: ಜ. 22 ರಾಮಮಂದಿರ ಲೋಕಾರ್ಪಣೆಗೆ ಸಾರ್ವತ್ರಿಕ ರಜೆ ಘೋಷಿಸಿ: ಸಿಎಂಗೆ ಯಶ್ ಪಾಲ್ ಮನವಿ

ಉಡುಪಿ: ಜ. 22 ರಾಮಮಂದಿರ ಲೋಕಾರ್ಪಣೆಗೆ ಸಾರ್ವತ್ರಿಕ ರಜೆ ಘೋಷಿಸಿ: ಸಿಎಂಗೆ ಯಶ್ ಪಾಲ್ ಮನವಿ

ಉಡುಪಿ, ಜ 01: ಸಮಸ್ತ ಹಿಂದೂಗಳ ಶ್ರದ್ಧಾ ಕೇಂದ್ರವಾಗಿ 500 ವರ್ಷಗಳ ಕನಸು ನನಸಾಗುವ ಸಮಸ್ತ ಭಾರತೀಯರ ಪಾಲಿಗೆ ಅತ್ಯಂತ ಪವಿತ್ರ ದಿನವಾಗಿ ಅಯೋಧ್ಯೆ ಶ್ರೀ ರಾಮ ಮಂದಿರದ ಲೋಕಾರ್ಪಣೆಯ ಭಾವನಾತ್ಮಕ ಐತಿಹಾಸಿಕ ಕ್ಷಣವನ್ನು ಮನೆ ಮನಗಳಲ್ಲಿ ಆಚರಿಸಲು ಜನವರಿ 22 ರಂದು ಸಾರ್ವತ್ರಿಕ ರಜೆ ಘೋಷಣೆ ಮಾಡುವಂತೆ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ರವರಿಗೆ ಉಡುಪಿ ಶಾಸಕ ಶ್ರೀ ಯಶ್ ಪಾಲ್ ಸುವರ್ಣ ಮನವಿ ಮಾಡಿದ್ದಾರೆ.

ಜನವರಿ 22 ರಂದು ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ಉಪಸ್ಥಿತಿಯಲ್ಲಿ ಶ್ರೀ ರಾಮ ದೇವರ ವಿಗ್ರಹಕ್ಕೆ ಪ್ರಾಣ ಪ್ರತಿಷ್ಠೆಯ ಮೂಲಕ ಕೋಟ್ಯಾಂತರ ಭಕ್ತರ ಹಲವು ಶತಮಾನಗಳ ಮಂದಿರದ ಲೋಕಾರ್ಪಣೆಗೆ ಜಗತ್ತು ಸಾಕ್ಷಿಯಾಗಲಿದೆ.

ಈ ವಿಶೇಷ ದಿನದಂದು ದೇಶದಾದ್ಯಂತ ಹಲವು ದೇವಸ್ಥಾನ, ಮಂದಿರ ಹಾಗೂ ಸಂಘ ಸಂಸ್ಥೆಗಳಲ್ಲಿ ವಿಶೇಷ ಪೂಜೆ, ಭಜನಾ ಸಂಕೀರ್ತನೆ, ಅನ್ನ ಸಂತರ್ಪಣೆಯ ಮೂಲಕ ಅತ್ಯಂತ ಸಂಭ್ರಮ ಸಡಗರದಿಂದ ಅಚರಿಸುತ್ತಿದ್ದು, ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ದೇಶದ ಜನತೆಗೆ ಈ ಪವಿತ್ರ ದಿನವನ್ನು ಮನೆ ಮನೆಗಳಲ್ಲಿ ದೀಪಾವಳಿ ಹಬ್ಬದಂತೆ ಆಚರಿಸಲು ಕರೆ ನೀಡಿದ್ದಾರೆ.

ರಾಜ್ಯ ಸರಕಾರ ಜನವರಿ 22 ರಂದು ಸಾರ್ವತ್ರಿಕ ರಜೆ ಘೋಷಣೆ ಮಾಡಿ ಪವಿತ್ರ ದಿನವನ್ನು ಸಂಭ್ರಮದಿಂದ ಆಚರಿಸಲು ರಾಜ್ಯದ ಜನತೆಗೆ ಅವಕಾಶ ಕಲ್ಪಿಸುವಂತೆ ಮನವಿ ಮಾಡಿದ್ದರೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News