Sunday, September 8, 2024
Homeಸುದ್ದಿಭಾರತ್ ಬ್ರ್ಯಾಂಡ್ ಅಕ್ಕಿ ವಿತರಣೆಗೆ ಯಡಿಯೂರಪ್ಪ ಚಾಲನೆ

ಭಾರತ್ ಬ್ರ್ಯಾಂಡ್ ಅಕ್ಕಿ ವಿತರಣೆಗೆ ಯಡಿಯೂರಪ್ಪ ಚಾಲನೆ

ಬೆಂಗಳೂರು, ಫೆ.06: ಮಾಜಿ ಸಿಎಂ ಯಡಿಯೂರಪ್ಪ ಅವರು ಕೇಂದ್ರ ಸರ್ಕಾರದ ಭಾರತ್ ಬ್ರ್ಯಾಂಡ್ ಅಕ್ಕಿ ವಿತರಣೆಗೆ ಇಂದು ಚಾಲನೆ ನೀಡಿದ್ದಾರೆ.

ಭಾರತ್ ಬ್ರ್ಯಾಂಡ್ ಅಕ್ಕಿ ವಿತರಣೆಗೆ ದೆಹಲಿಯಲ್ಲಿ ಆಹಾರ ಸಚಿವ ಪಿಯೂಷ್ ಗೋಯಲ್ ಇಂದು ಚಾಲನೆ ನೀಡಿದ್ದು, ಈ ಉದ್ಘಾಟನೆಯ ನಂತರ ಕರ್ನಾಟಕದಲ್ಲಿ ಯಡಿಯೂರಪ್ಪ ಅವರು ಭಾರತ್ ಅಕ್ಕಿ ವಿತರಣೆಗೆ ಚಾಲನೆ ನೀಡಿದ್ದಾರೆ.

ಇನ್ನು ಮೊದಲ ಹಂತದಲ್ಲಿ 5 ಲಕ್ಷ ಟನ್ ಅಕ್ಕಿಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಲು ನಿರ್ಧರಿಸಿದ್ದು, ನಗರದ ಯಶವಂತಪುರದ ಎನ್‌ಸಿಸಿಎಫ್ ಗೋಡೌನ್‌ನಿಂದ ಸುಮಾರು 100 ಮೊಬೈಲ್ ವ್ಯಾನ್‌ಗಳ ಮೂಲಕ ನಗರದ ವಿವಿಧ ಭಾಗಗಳಿಗೆ ಸಂಚರಿಸಿ ಅಕ್ಕಿ ವಿತರಣೆ ನಡೆಯಲಿದೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News