Sunday, September 8, 2024
Homeಸುದ್ದಿಕರಾವಳಿಉಡುಪಿ: 'ಜಿಲ್ಲೆಯಲ್ಲಿ ನಕ್ಸಲರ ಚಟುವಟಿಕೆ ಬಗ್ಗೆ ಪರಿಶೀಲಿಸಲಾಗುತ್ತಿದೆ'- ಎಸ್ಪಿ ಡಾ.ಅರುಣ್ ಕೆ

ಉಡುಪಿ: ‘ಜಿಲ್ಲೆಯಲ್ಲಿ ನಕ್ಸಲರ ಚಟುವಟಿಕೆ ಬಗ್ಗೆ ಪರಿಶೀಲಿಸಲಾಗುತ್ತಿದೆ’- ಎಸ್ಪಿ ಡಾ.ಅರುಣ್ ಕೆ

ಉಡುಪಿ : ನಕ್ಸಲರು ಕಾಣಿಸಿಕೊಂಡಿರುವ ಶಂಕೆ ಇದೆ ಎಂದು ಕೆಲವು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ, ನಾವು ಅದನ್ನು ಪರಿಶೀಲಿಸುತ್ತಿದ್ದೇವೆ ಮತ್ತು ಮಾಹಿತಿಯು ನಿಜವಾಗಿದ್ದರೆ ತಿಳಿಸುತ್ತೇವೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ. ಹೇಳಿದ್ದಾರೆ.


ನಕ್ಸಲ್ ನಿಗ್ರಹ ಪಡೆ (ಎಎನ್‌ಎಫ್)  ಕಟ್ಟೆಚ್ಚರ ವಹಿಸಿದೆ ಎಂದು ಅವರು ತಿಳಿಸಿದರು.

ಕರ್ನಾಟಕದ ಕರಾವಳಿ ಮತ್ತು ಗುಡ್ಡಗಾಡು ಪ್ರದೇಶಗಳಲ್ಲಿ ಮಾವೋವಾದಿಗಳ ಚಲನವಲನ ಕಂಡುಬಂದ ಹಿನ್ನಲೆಯಲ್ಲಿ ಅಧಿಕಾರಿಗಳು ಕಟ್ಟೆಚ್ಚರ ವಹಿಸಿದ್ದಾರೆ.ವಿಕ್ರಮ್ ಗೌಡ ನೇತೃತ್ವದ ಮಾವೋವಾದಿಗಳ ತಂಡ ಕೇರಳದಿಂದ ಉಡುಪಿ ಜಿಲ್ಲೆಯ ಬೈಂದೂರು ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೆಲವು ಭಾಗಗಳಿಗೆ ಬಂದಿದ್ದಾರೆ.

ಕೊಲ್ಲೂರು, ಮುದೂರು, ಜಡ್ಕಲ್, ಬೆಳ್ಕಲ್ ಗ್ರಾಮಗಳ ಮನೆಗಳಿಗೆ ಮಾವೋವಾದಿ ತಂಡ ಭೇಟಿ ನೀಡಿ ಶಸ್ತ್ರಾಸ್ತ್ರಗಳನ್ನು ಹೊತ್ತೊಯ್ದಿರುವ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ಲಭಿಸಿದೆ. ಈ ಮಾಹಿತಿ ಮೇರೆಗೆ ಪೊಲೀಸರು ಮತ್ತು ನಕ್ಸಲ್ ನಿಗ್ರಹ ಪಡೆ (ಎಎನ್‌ಎಫ್) ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಿದೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News