ಗ್ರಾಮೀಣ ಪತ್ರಕರ್ತರ ಕನಸು ನನಸು: ಬಜೆಟ್‍ನಲ್ಲಿ ಉಚಿತ ಬಸ್ ಪಾಸ್ ಘೋಷಣೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ಬಜೆಟ್‍ನಲ್ಲಿ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಘೋಷಣೆ ಮಾಡಿದ್ದಾರೆ. ಈ ಮೂಲಕ ಗ್ರಾಮೀಣ ಭಾಗದ ಪತ್ರಕರ್ತರ ದಶಕಗಳ ಕನಸು ನನಸಾಗಿದೆ.

ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ಸೌಲಭ್ಯ ನೀಡಲಾಗುವುದು ಎಂದು ಸಿಎಂ ಹೇಳಿದ್ದಾರೆ.

ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924ರಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಅಂಗವಾಗಿ ವಿಶೇಷ ಕಾರ್ಯಕ್ರಮ ಆಯೋಜನೆಗೆ 2 ಕೋಟಿ ರೂ. ಅನುದಾನ ನೀಡಲಾಗುವುದು. ಜೊತೆಗೆ ಸಾಮಾಜಿಕ ನ್ಯಾಯದ ಕ್ಷೇತ್ರಕ್ಕೆ ಕೊಡುಗೆ ನೀಡಿರುವ ಪತ್ರಕರ್ತರಿಗೆ “ವಡ್ಡರ್ಸೆ ರಘುರಾಮ ಶೆಟ್ಟಿ ಪ್ರಶಸ್ತಿ” ನೀಡಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.

You cannot copy content from Baravanige News

Scroll to Top