ಅಯೋಧ್ಯೆ ರಾಮಮಂದಿರ ಸನ್ನಿಧಾನದಲ್ಲಿ ಉಡುಪಿಯ ಆರ್‌ ಎಸ್‌ಎಸ್‌ ಕಾರ್ಯಕರ್ತ ಹೃದಯಾಘಾತದಿಂದ ನಿಧನ

ಉಡುಪಿ , ಮಾ 11: ಉಡುಪಿಯ ಸಂಘದ ( ಆರ್‌ ಎಸ್‌ಎಸ್‌) ಹಿರಿಯ ಸಕ್ರಿಯ ಮತ್ತು ರಾಷ್ಟ್ರಭಕ್ತ ಪಾಂಡುರಂಗ ಶಾನುಭಾಗರು ಅಯೋಧ್ಯೆಯಲ್ಲಿ ಭಾನುವಾರ ಮಧ್ಯಾಹ್ನ ರಾಮಮಂದಿರದ ಸಮೀಪದಲ್ಲಿಯೇ ಹೃದಯಾಘಾತದಿಂದ ನಿಧನರಾಗಿದ್ದಾರೆ.

ನಿನ್ನೆ ಬೆಳಿಗ್ಗೆಯಷ್ಟೇ ಅವರು ಶ್ರೀ ರಾಮನ ದರ್ಶನ‌ ಪಡೆದು ಅತ್ಯಂತ ಧನ್ಯತೆಯನ್ನು ವ್ಯಕ್ತಪಡಿಸಿ ಪೇಜಾವರ ಶ್ರೀಗಳಿಂದ ಕಲಶಾಭಿಷೇಕದ ತೀರ್ಥ ಪ್ರಸಾದ ಸ್ವೀಕರಿಸಿ ಸಂತೋಷದಿಂದ ತೆರಳಿದ್ದರು.

ಅಪರಾಹ್ನದ ಪಲ್ಲಕ್ಕಿ ಉತ್ಸವಕ್ಕೆ ಆಗಮಿಸುವಾಗ ಮಂದಿರದ ಹೊರಭಾಗದ ಗೇಟ್ ಬಳಿಯಲ್ಲಿ ಅವರಿಗೆ ಹೃದಯಾಘಾತವಾಗಿದೆ. ಸಮೀಪವರ್ತಿಗಳು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಕೊನೆಯುಸಿರೆಳೆದಿದ್ದಾರೆ.

ಪಾಂಡುರಂಗ ಅವರು ಜೀವನ ಪರ್ಯಂತ ಹಿಂದು ಸಿದ್ಧಾಂತಕ್ಕಾಗಿ ದೈಹಿಕ ಅಂಧತ್ವವಿದ್ದರೂ , ಸಂಘದಲ್ಲಿ ಅತ್ಯಂತ ಸಕ್ರಿಯರಾಗಿದ್ದ ಶಾನುಭಾಗರು ಅಪೂರ್ವ ಚಿಂತಕರೂ ರಾಷ್ಟ್ರ ಭಕ್ತರೂ ಆಗಿದ್ದರು.

You cannot copy content from Baravanige News

Scroll to Top