ರಾಜ್ಯದಲ್ಲಿ ಕಾಟನ್ ಕ್ಯಾಂಡಿ ಬ್ಯಾನ್, ಗೋಬಿ ಮಂಚೂರಿಯಲ್ಲಿ ಕೃತಕ ಬಣ್ಣ ಬಳಕೆಗೆ ಬ್ರೇಕ್

ಬೆಂಗಳೂರು, ಮಾ.11: ರಾಜ್ಯದಲ್ಲಿ ಅಪಾಯಕಾರಿಯಾದ ಕಾಟನ್ ಕ್ಯಾಂಡಿ ಬ್ಯಾನ್ ಮಾಡಲಾಗಿದೆ. ಇನ್ನು ಗೋಬಿ ಮಂಚೂರಿಯ ತಯಾರಿಕೆಯಲ್ಲಿ ಯಾವುದೇ ಕೃತಕ ಬಣ್ಣಗಳನ್ನು ಬಳಸುವಂತಿಲ್ಲ. ಈ ಬಗ್ಗೆ ಸುತ್ತೋಲೆ ಹೊರಡಿಸಲಾಗುತ್ತದೆ. ಕ್ಯಾಂಡಿ ಬ್ಯಾನ್ ಮಾರಾಟ ಮಾಡಿದರೇ ಮತ್ತು ಗೋಬಿ ಮಂಚೂರಿಯ ತಯಾರಿಕೆಯಲ್ಲಿ ಯಾವುದೇ ಕೃತಕ ಬಣ್ಣ ಬಳಸಿದರೇ ಆಹಾರ ಸುರಕ್ಷಿತೆ ಮತ್ತು ಗುಣಮಟ್ಟ ಕಾಯ್ದೆ 2006 ನಿಯಮ 59ರ ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್ ಅವರು ರಾಜ್ಯದಲ್ಲಿ ಗೋಬಿ ಮಂಚೂರಿ ತಯಾರಿಕೆಯಲ್ಲಿ ಕೃತಕ ಬಣ್ಣ ಬಳಕೆ ನಿರ್ಬಂಧಿಸಲಾಗಿದೆ.

ಒಂದು ವೇಳೆ ಕೃತಕ ಕಲರ್‌ ಬಳಸಿ ಗೋಬಿ ಮಂಚೂರಿ ಮಾರಾಟ ಮಾಡಿದ್ರೆ 10 ಲಕ್ಷ ರೂಪಾಯಿ ದಂಡ ವಿಧಿಸಲಾಗುತ್ತೆ. ನಿಯಮ ಉಲ್ಲಂಘಿಸಿದವರ ವಿರುದ್ಧ 7 ವರ್ಷಕ್ಕಿಂತ ಅಧಿಕ ಜೈಲು ಶಿಕ್ಷೆಗೆ ಒಳಪಡಬಹುದು. ತಪ್ಪಿತಸ್ಥರ ವಿರುದ್ಧ ಜೀವಾವಧಿ ಶಿಕ್ಷೆಗೂ ಕಾನೂನಿನಲ್ಲಿ ಅವಕಾಶವಿದೆ ಎಂದಿದ್ದಾರೆ.

ಅಸಲಿಗೆ ಗೋಬಿ ಮಂಚೂರಿ ಅಸುರಕ್ಷಿತ ಅಲ್ಲ. ಅದನ್ನ ರಾಜ್ಯ ಸರ್ಕಾರ ಬ್ಯಾನ್ ಮಾಡಿಲ್ಲ. ಗೋಬಿ ಅನ್ನೋದು ಒಂದು ತರಕಾರಿ, ಅದನ್ನ ಬ್ಯಾನ್ ಮಾಡಲು ಆಗಲ್ಲ. ಆದರೆ ಕೃತಕ ಬಣ್ಣ ಬಳಕೆ ಮಾಡಿ ಗೋಬಿ ಮಂಚೂರಿ ಮಾರುವುದ ಅಪಾಯಕಾರಿಯಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಎಚ್ಚರಿಸಿದ್ದಾರೆ.

You cannot copy content from Baravanige News

Scroll to Top