‘ರಾಜಕೀಯದಲ್ಲಿ ಅಸಮಾಧಾನಗಳು ಸಹಜ, ನನ್ನ ಸ್ಪರ್ಧೆ ಖಚಿತ’- ಶೋಭಾ ಕರಂದ್ಲಾಜೆ

ಸುಬ್ರಹ್ಮಣ್ಯ : “ರಾಜಕೀಯ ಎಂದರೆ ಅಸಮಾಧಾನಗಳು ಇರುತ್ತದೆ. ಗೆಲ್ಲುವ ಸೀಟನ್ನು ಎಲ್ಲರೂ ಕೇಳುತ್ತಾರೆ. ಸೀಟು ಕೇಳುವಾಗ ಗೊಂದಲಗಳು ಆಗಿಯೇ ಆಗುತ್ತದೆ. ಇದಕ್ಕೂ ಚುನಾವಣೆಗೂ ಯಾವುದೇ ಸಂಬಂಧ ಇರುವುದಿಲ್ಲ” ಎಂದು ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.


ಅವರು ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ನೆಟ್ಟಣ ಕಿದು ಸಿಪಿಐಆರ್ ಕಾರ್ಯಕ್ರಮದಲ್ಲಿ ಭಾಗಹಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.

ನಮ್ಮ ಕೇಂದ್ರದ ಚುನಾವಣಾ ಮಂಡಳಿ ಯಾವ ನಿರ್ಧಾರ ಕೈಗೊಳ್ಳುತ್ತದೆಯೋ ಅದಕ್ಕೆ ಬದ್ಧರಾಗಿದ್ದೇವೆ ಎಂದರು. ನೀವು ಸ್ಪರ್ಧೆ ಮಾಡುತ್ತೀರಾ ಎಂಬ ಪ್ರಶ್ನೆಗೆ, ನಾನು ಸ್ಪರ್ಧೆ ಮಾಡಿಯೇ ಮಾಡುತ್ತೇನೆ ಎಂದು ನಗುತ್ತಾ ಉತ್ತರಿಸಿದ್ದಾರೆ

ಇನ್ನೊಂದೆಡೆ ಚಿಕ್ಕಮಗಳೂರು ಬಿಜೆಪಿ ಪಕ್ಷದ ಕಚೇರಿಯಲ್ಲಿ ನಿನ್ನೆ ನಡೆದ ಸಭೆಯಲ್ಲಿ, “ಹಾಲಿ ಸಂಸದೆ ವಿರುದ್ಧ ಬಿಜೆಪಿ ಮುಖಂಡರು, ಕಾರ್ಯಕರ್ತರ ಅಸಮಾಧಾನ ಸ್ಪೋಟಗೊಂಡಿದ್ದು, ಪಕ್ಷದ ನಾಯಕರು ಸಭೆಯಲ್ಲಿ ಮಾತು ಆರಂಭಿಸುತ್ತಿದ್ದಂತೆ ʼಗೋ ಬ್ಯಾಕ್ʼ ಶೋಭಾ ಘೋಷಣೆ ಕೂಗಿ ಶೋಭಾ ಕರಂದ್ಲಾಜೆ ಅವರಿಗೆ ಟಿಕೆಟ್ ನೀಡಬಾರದು, ಮಾಜಿ ಶಾಸಕ ಸಿ.ಟಿ.ರವಿ ಅವರಿಗೆ ಈ ಬಾರಿಯ ಲೋಕಸಭೆ ಟಿಕೆಟ್ ನೀಡಬೇಕು” ಎಂದು ಆಗ್ರಹಿಸಿದ್ದರು.

You cannot copy content from Baravanige News

Scroll to Top