ಕಾಂಗ್ರೆಸ್ 2ನೇ ಪಟ್ಟಿ ಫೈನಲ್: ಇಂದು ಅಧಿಕೃತ ಘೋಷಣೆ

ನವದೆಹಲಿ, ಮಾ 20: ಹಲವು ಪೈಪೋಟಿ, ಕಸರತ್ತುಗಳ ಬಳಿಕ ಚುನಾವಣೆ ಅಭ್ಯರ್ಥಿಗಳ ಆಯ್ಕೆಗೆ ದೆಹಲಿಯಲ್ಲಿ ಸಭೆ ಸೇರಿದ್ದ ಕಾಂಗ್ರೆಸ್ ಚುನಾವಣಾ ಸಮಿತಿಯು ಲೋಕಸಭಾ ಕ್ಷೇತ್ರಗಳಿಗೆ ಬಾಕಿಯಿದ್ದ 21 ಕ್ಷೇತ್ರಗಳ ಪೈಕಿ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಅಂತಿಮಗೊಳಿಸುವಲ್ಲಿ ಯಶಸ್ವಿಯಾಗಿದ್ದು, ಈ ಪಟ್ಟಿಯನ್ನು ಇಂದು ಪ್ರಕಟಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.

ರಾಜ್ಯದ 7 ಕ್ಷೇತ್ರಗಳಿಗೆ ಕಾಂಗ್ರೆಸ್‌ ಮೊದಲ ಪಟ್ಟಿಯಲ್ಲಿ ಈಗಾಗಲೇ ಟಿಕೆಟ್‌ ಘೋಷಣೆಯಾಗಿದ್ದು, ಇನ್ನುಳಿದ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಗೆ ಮಂಗಳವಾರ ಹೈವೋಲ್ಟೇಜ್ ಮೀಟಿಂಗ್ ನಡೆಸಿತ್ತು. ನಿನ್ನೆ ದೆಹಲಿಯ ಎಐಸಿಸಿ ಕಚೇರಿಯಲ್ಲಿ ಗುಜರಾತ್, ತೆಲಂಗಾಣ, ತಮಿಳುನಾಡು ಸೇರಿದಂತೆ ಕರ್ನಾಟಕದ ಅಭ್ಯರ್ಥಿಗಳ ಬಗ್ಗೆ ಚರ್ಚೆಯಾ ಮಾಡಿ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲಾಗಿದೆ
ಸಿಇಸಿ ಅಂತಿಮಗೊಳಿಸಿರುವ ಸಂಭವನೀಯ ಅಭ್ಯರ್ಥಿಗಳು ವಿವರ

ದಕ್ಷಿಣ ಕನ್ನಡ – ಪದ್ಮರಾಜ್‌ ರಾಮಯ್ಯ
ಉಡುಪಿ- ಚಿಕ್ಕಮಗಳೂರು: ಜಯಪ್ರಕಾಶ್‌ ಹೆಗ್ಡೆ
ಬೆಂಗಳೂರು ದಕ್ಷಿಣ: ಸೌಮ್ಯಾ ರೆಡ್ಡಿ
ಚಿಕ್ಕಬಳ್ಳಾಪುರ: ರಕ್ಷಾ ರಾಮಯ್ಯ
ಬೆಂಗಳೂರು ಕೇಂದ್ರ: ನಜೀರ್‌ ಅಹ್ಮದ್‌ ಮನ್ಸೂರ್‌ ಅಲಿಖಾನ್‌
ಕೋಲಾರ: ಡಾ| ಎಲ್‌. ಹನುಮಂತಯ್ಯ
ಕಲಬುರಗಿ: ರಾಧಾಕೃಷ್ಣ ದೊಡ್ಡಮನಿ
ಬೀದರ್‌: ರಾಜಶೇಖರ ಪಾಟೀಲ್‌ ಹುಮ್ನಾಬಾದ್‌
ರಾಯಚೂರು: ಕುಮಾರ ನಾಯಕ್‌
ಕೊಪ್ಪಳ: ರಾಜಶೇಖರ ಹಿಟ್ನಾಳ್‌
ಚಿತ್ರದುರ್ಗ: ಬಿ.ಎನ್‌. ಚಂದ್ರಪ್ಪ
ದಾವಣಗೆರೆ: ಡಾ| ಪ್ರಭಾ ಮಲ್ಲಿಕಾರ್ಜುನ
ಚಾಮರಾಜನಗರ: ಸುನಿಲ್‌ ಬೋಸ್‌
ಬಾಗಲಕೋಟೆ: ಸಂಯುಕ್ತ ಶಿವಾನಂದ ಪಾಟೀಲ್‌/ಅಜಯಕುಮಾರ ಸರನಾಯಕ್‌
ಬೆಳಗಾವಿ: ಮೃಣಾಲ್‌ ಹೆಬ್ಬಾಳ್ಕರ್‌
ಚಿಕ್ಕೋಡಿ: ಪ್ರಿಯಾಂಕಾ ಜಾರಕಿಹೊಳಿ
ಮೈಸೂರು: ಎಂ. ಲಕ್ಷ್ಮಣ

ಇನ್ನುಳಿದ ಬೆಂಗಳೂರು ಉತ್ತರ, ಉತ್ತರ ಕನ್ನಡ, ಹುಬ್ಬಳ್ಳಿ-ಧಾರವಾಡ, ಬಳ್ಳಾರಿ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಅಂತಿಮಗೊಳಿಸಲಾಗಿಲ್ಲ ಎಂದು ತಿಳಿದುಬಂದಿದೆ.

You cannot copy content from Baravanige News

Scroll to Top