Monday, May 20, 2024
Homeಸುದ್ದಿಕರಾವಳಿಇಂದಿನಿಂದ ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭ

ಇಂದಿನಿಂದ ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭ

ಲೋಕಸಭೆ ಚುನಾವಣೆಗೆ ಚುನಾವಣಾ ಆಯೋಗವು ದಿನಾಂಕ ಘೋಷಣೆ ಮಾಡಿದೆ. ದೇಶದಲ್ಲಿ ಒಟ್ಟು 7 ಹಂತಗಳಲ್ಲಿ ಮತದಾನ ನಡೆಯಲಿದೆ.

18ನೇ ಅವಧಿಯ ಲೋಕಸಭೆ ಚುನಾವಣೆಯು ಏಪ್ರಿಲ್ 19ರಿಂದ ಆರಂಭವಾಗಲಿದ್ದು, ಜೂನ್ 4ಕ್ಕೆ ದೇಶದ ಆಡಳಿತದ ಚುಕ್ಕಾಣಿ ಹಿಡಿಯೋರು ಯಾರು ಎಂದು ಗೊತ್ತಾಗಲಿದೆ. ಇನ್ನು ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ.

ಮೊದಲ ಹಂತದ ಚುನಾವಣೆಗೆ ಇಂದಿನಿಂದ ಮಾರ್ಚ್ 27ರವರೆಗೆ ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಮೊದಲ ಹಂತದ ಚುನಾವಣೆ ಏಪ್ರಿಲ್ 19, ಎರಡನೇ ಹಂತದ ಮತದಾನ ಏಪ್ರಿಲ್ 26, ಮೇ 7ರಂದು ಮೂರನೇ ಹಂತದ ಮತದಾನ ನಡೆಯಲಿದೆ.

ಅದೇ ರೀತಿ ಮೇ 13 ರಂದು ನಾಲ್ಕನೇ, ಮೇ 20 ರಂದು ಐದನೇ, ಮೇ 25 ರಂದು 6 ಹಾಗೂ ಜೂನ್ 1 ರಂದು ಏಳನೇ ಹಂತದಲ್ಲಿ ಮತದಾನ ನಡೆಯಲಿದೆ. ಮೊದಲ ಹಂತದಲ್ಲಿ 102 ಲೋಕಸಭೆ ಕ್ಷೇತ್ರಗಳಿಗೆ ಮತದಾನ ನಡೆದರೆ, ಎರಡನೇ ಹಂತದಲ್ಲಿ 89, ಮೂರನೇ ಹಂತದಲ್ಲಿ 94, ನಾಲ್ಕನೇ ಹಂತದಲ್ಲಿ 96, ಐದನೇ ಹಂತದಲ್ಲಿ 49, ಆರನೇ ಹಂತದಲ್ಲಿ 57 ಹಾಗೂ ಏಳನೇ ಹಂತದಲ್ಲಿ 57 ಲೋಕಸಭೆ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

ಮೊದಲ ಹಂತದಲ್ಲಿ ತಮಿಳುನಾಡಿನ 39 ಲೋಕಸಭಾ ಕ್ಷೇತ್ರ, ಉತ್ತರ ಪ್ರದೇಶದ 6, ರಾಜಸ್ಥಾನದ 12, ಮಧ್ಯಪ್ರದೇಶ 6, ಉತ್ತರಾಖಂಡ, ಅಸ್ಸಾಂ, ಮಹಾರಾಷ್ಟ್ರ 5 ಕ್ಷೇತ್ರ ಬಿಹಾರದ 4, ಪಶ್ಚಿಮ ಬಂಗಾಳ 3 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಮಾರ್ಚ್ 27ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶವಿದ್ದು, ಮಾರ್ಚ್ 28 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏಪ್ರಿಲ್ 19 ರಂದು ಮತದಾನ ನಡೆಯಲಿದೆ. ಜೂನ್ 4ರಂದು ಫಲಿತಾಂಶ ಘೋಷಣೆಯಾಗಲಿದೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News