Friday, May 10, 2024
Homeಸುದ್ದಿರಾಜ್ಯಬಿಗ್ ಬಾಸ್ ಖ್ಯಾತಿಯ ಸೋನು ಶ್ರೀನಿವಾಸ್ ಗೌಡ ಅರೆಸ್ಟ್ : ಕಾರಣ ಕೇಳಿದ್ರೆ ಶಾಕ್ ಆಗ್ತೀರಾ

ಬಿಗ್ ಬಾಸ್ ಖ್ಯಾತಿಯ ಸೋನು ಶ್ರೀನಿವಾಸ್ ಗೌಡ ಅರೆಸ್ಟ್ : ಕಾರಣ ಕೇಳಿದ್ರೆ ಶಾಕ್ ಆಗ್ತೀರಾ

ಬೆಂಗಳೂರು : ರೀಲ್ಸ್ ಸ್ಟಾರ್ , ಬಿಗ್ ಬಾಸ್ ಕನ್ನಡ ಒಟಿಟಿ ಸೀಸನ್ ಮೂಲಕ ಫೇಮಸ್ ಆದ ಸೋನು ಶ್ರೀನಿವಾಸ್ ಗೌಡ ಅವರು ಅರೆಸ್ಟ್ ಆಗಿದ್ದಾರೆ. ಕಾನೂನು ಬಾಹಿರವಾಗಿ ಅವರು ಮಗುವನ್ನು ದತ್ತು ಪಡೆದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ.


ಮಕ್ಕಳ ರಕ್ಷಣಾ ಕಚೇರಿ ಇಲಾಖೆ ಅಧಿಕಾರಿಗಳು ಹಾಗೂ ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸರು ಸೋನು ಶ್ರೀನಿವಾಸ್ ಗೌಡ ಬಂಧನ ಮಾಡಿದ್ದಾರೆ. ಮಗು ದತ್ತು ಪಡೆದಿರುವುದಾಗಿ ಸೋನು ಗೌಡ ಇತ್ತೀಚೆಗೆ ಹೇಳಿಕೊಂಡಿದ್ದರು. ಸಾಮಾಜಿಕ ಜಾಲತಾಣದಲ್ಲಿ ಮಗು ದತ್ತು ಪಡೆದಿರುವ ಬಗ್ಗೆ ಟ್ರೋಲ್ ಆಗಿತ್ತು.

ಸೋನು ಶ್ರೀನಿವಾಸ್ ಗೌಡ ವಯಸ್ಸಿನ ಪ್ರಕಾರ ಮಕ್ಕಳನ್ನ ದತ್ತು‌ ಪಡೆಯುವ ಅರ್ಹತೆ ಇಲ್ಲ. ಜೊತೆಗೆ ಹೆಣ್ಣು ಮಗು ಆಗಿದ್ರು ತನ್ನ ಸೋಶಿಯಲ್ ಮೀಡಿಯಾದಲ್ಲಿ ಮಗುವನ್ನ ದತ್ತು ಪಡೆದಿರೋದಾಗಿ ಪ್ರಚಾರ ಮಾಡಿದ್ದರು. ಉತ್ತರ ಕರ್ನಾಟಕದ ಮೂಲದ ಬಾಲಕಿಯನ್ನು ದತ್ತು ಪಡೆದಿರುವುದಾಗಿ ಸೋನು ಸೋಷಿಯಲ್ ಮೀಡಿಯಾದಲ್ಲಿ ಫುಲ್ ಬಿಲ್ಡಪ್ ಕೊಟ್ಟಿದ್ದಳು. ಕಾನೂನು ಪ್ರಕರಣ ದತ್ತು ಪಡೆದರೂ ಕೂಡ ಸಾರ್ವಜನಿಕವಾಗಿ ಮಾಹಿತಿ ಹಂಚಿಕೊಳ್ಳುವಂತಿಲ್ಲ ಎನ್ನಲಾಗಿದೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News