Saturday, April 27, 2024
Homeಸುದ್ದಿಉಡುಪಿ: ಲೋಕಸಭಾ ಚುನಾವಣೆ ಹಿನ್ನೆಲೆ ಜಿಲ್ಲೆಯಲ್ಲಿ ಮೇ.5 ರಿಂದ ಮದ್ಯ ಮಾರಾಟ ನಿಷೇಧ

ಉಡುಪಿ: ಲೋಕಸಭಾ ಚುನಾವಣೆ ಹಿನ್ನೆಲೆ ಜಿಲ್ಲೆಯಲ್ಲಿ ಮೇ.5 ರಿಂದ ಮದ್ಯ ಮಾರಾಟ ನಿಷೇಧ

ಉಡುಪಿ,ಮಾ: ಶಿವಮೊಗ್ಗ-ಉಡುಪಿ ಲೋಕಸಭಾ ಕ್ಷೇತ್ರದ ಚುನಾವಣೆ-2024 ರ ಹಿನ್ನೆಲೆ, ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಮೇ 7 ರಂದು ಮತದಾನ ನಡೆಸಲು ಚುನಾವಣಾ ಆಯೋಗವು ಚುನಾವಣಾ ವೇಳಾಪಟ್ಟಿಯನ್ನು ಘೋಷಿಸಿದೆ.

ಈ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಶಾಂತಿಪಾಲನೆ, ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕರ ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಹಾಗೂ ಚುನಾವಣಾ ಕಾರ್ಯಗಳು ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ಶಾಂತಿಯುತ ವಾತಾವರಣದಲ್ಲಿ ನಡೆಸಲು ಅನುಕೂಲವಾಗುವಂತೆ ಕರ್ನಾಟಕ ಅಬಕಾರಿ ಕಾಯ್ದೆ ಸಾಮಾನ್ಯ ನಿಯಮಾವಳಿ 1967 ಕಲಂ 10(ಬಿ) ರಂತೆ ಹಾಗೂ ಪ್ರಜಾ ಪ್ರಾತಿನಿಧ್ಯ ಕಾಯ್ದೆ 1951 ರ ಕಲಂ135(ಸಿ) ರ ಪ್ರಕಾರ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಮೇ 5 ರ ಸಂಜೆ 5 ಗಂಟೆಯಿಂದ ಮೇ 7 ರ ಮಧ್ಯರಾತ್ರಿ 12 ರ ವರೆಗೆ ಕುಂದಾಪುರ ಹಾಗೂ ಬೈಂದೂರು ತಾಲೂಕು ವ್ಯಾಪ್ತಿಯ ಎಲ್ಲಾ ರೀತಿಯ ಮದ್ಯದಂಗಡಿಗಳನ್ನು, ಮದ್ಯಮಾರಾಟ ಡಿಪೋಗಳನ್ನು, ಮದ್ಯ ತಯಾರಿಕಾ ಡಿಸ್ಟಿಲರಿಗಳನ್ನು. ಸ್ಟಾರ್ ಹೋಟೆಲ್‌ಗಳನ್ನು, ಶೇಂದಿ ಅಂಗಡಿಗಳನ್ನು ಹಾಗೂ ಕ್ಲಬ್‌ಗಳನ್ನು ಮುಚ್ಚಲು ಆದೇಶಿಸಿ, ಮದ್ಯ ಮಾರಾಟ ಹಾಗೂ ಸರಬರಾಜು ಮಾಡುವುದನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿದ್ದಾರೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News