Saturday, July 27, 2024
Homeಸುದ್ದಿಕರಾವಳಿಇಂದಿನಿಂದ ಕರ್ನಾಟಕದ ಹಲವೆಡೆ ಭಾರಿ ಮಳೆ ಸಾಧ್ಯತೆ : 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಇಂದಿನಿಂದ ಕರ್ನಾಟಕದ ಹಲವೆಡೆ ಭಾರಿ ಮಳೆ ಸಾಧ್ಯತೆ : 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬಿಸಿಲ ಧಗೆಯಿಂದ ಪರಿತಪಿಸುತ್ತಿರುವ ಕರ್ನಾಟಕದ ಜನತೆಗೆ ಮಳೆರಾಯ ತಂಪೆರೆಯಲಿದ್ದಾನೆ, ವಿವಿಧ ಜಿಲ್ಲೆಗಳಲ್ಲಿ ಐದು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದಿನಿಂದ ಉತ್ತರ ಒಳನಾಡಿನ ಬಾಗಲಕೋಟೆ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರದಲ್ಲಿ ಅಧಿಕ ಮಳೆ ಸುರಿಯಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು,ಮಂಡ್ಯ, ಮೈಸೂರು, ರಾಮನಗರದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ರಾಮನಗರ, ತುಮಕೂರು, ವಿಜಯನಗರದಲ್ಲಿ ಒಣಹವೆ ಮುಂದುವರೆಯಲಿದೆ. ಮುಂದಿನ ಮೂರು ದಿನಗಳಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸೆಕೆ ಹಾಗೂ ಆರ್ದ್ರತೆ ಹೆಚ್ಚಾಗಲಿದೆ. ಹಾಗೆಯೇ ಮುಂದಿನ 5 ದಿನಗಳ ಕಾಲ ಬಾಗಲಕೋಟೆ, ಬೆಳಗಾವಿ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 2-4 ಡಿಗ್ರಿ ಸೆಲ್ಸಿಯಸ್ನಷ್ಟು ಹೆಚ್ಚಳವಾಗಲಿದೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News