ಕುತ್ಯಾರು: ಆನೆಗುಂದಿ ಶ್ರೀ ಸರಸ್ವತಿ ಪೀಠ ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿ ಹೈಸ್ಕೂಲ್ ನಲ್ಲಿ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

ಆನೆಗುಂದಿ ಶ್ರೀ ಸರಸ್ವತಿ ಪೀಠ ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿ ಹೈಸ್ಕೂಲ್ ಕುತ್ಯಾರು ಇಲ್ಲಿ ಏಪ್ರಿಲ್ 5ರಂದು ಬೇಸಿಗೆ ಶಿಬಿರದ ಸಮಾರೋಪ ಸಮಾರಂಭವು ನಡೆಯಿತು.

ಈ ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಅಸೆಟ್ ನ ಪದಾಧಿಕಾರಿಗಳಾದ ಶ್ರೀ G.T . ಆಚಾರ್ಯ ವಹಿಸಿ, ಮಕ್ಕಳಿಗೆ ಬೇಸಿಗೆ ಶಿಬಿರದ ಮಹತ್ವ, ಶಿಬಿರದ ಕಲಿತ ವಿಷಯಗಳನ್ನು ತಮ್ಮಲ್ಲಿ ಅಳವಡಿಸಿಕೊಳ್ಳಬೇಕೆಂದು ತಮ್ಮ ಅಧ್ಯಕ್ಷೀಯ ಮಾತುಗಳಲ್ಲಿ ಹೇಳಿದರು. ಕಾಪು ಜನಾರ್ಧನ ಆಚಾರ್ಯ, ಶೈಕ್ಷಣಿಕ ಸಲಹೆಗಾರರಾದ ಶ್ರೀ ದಿವಾಕರ ಆಚಾರ್ಯ, ಶ್ರೀಮತಿ ಭಾರತಿ ದಿವಾಕರ ಆಚಾರ್ಯ, ಶ್ರೀ ಹರೀಶ್ ಆಚಾರ್ಯ, ಪ್ರಾಂಶುಪಾಲೆ ಶ್ರೀಮತಿ ಸಂಗೀತಾ, ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಪ್ರಾಂಶುಪಾಲೆ ಶ್ರೀಮತಿ ಸಂಗೀತಾ ಸ್ವಾಗತಿಸಿದರು. ಶಿಕ್ಷಕಿ ಶ್ರೀಮತಿ ಅನಿತಾ ಕಾರ್ಯಕ್ರಮ ನಿರೂಪಿಸಿ, ಶಿಕ್ಷಕಿ ಶ್ರೀಮತಿ ವಾಣಿ ವಂದಿಸಿದರು.

You cannot copy content from Baravanige News

Scroll to Top