ಕುಂದಾಪುರ: ಖಾಸಗಿ ರೆಸಾರ್ಟ್‌ನ ಈಜುಕೊಳದಲ್ಲಿ ಮುಳುಗಿ 10 ವರ್ಷದ ಬಾಲಕ ಸಾವು

ಕುಂದಾಪುರ, ಏ. 12: ಈದ್ ಪ್ರಯುಕ್ತ ಖಾಸಗಿ ರೆಸಾರ್ಟ್ ನಲ್ಲಿ ಆಟವಾಡಲು ಹೋಗಿದ್ದ ಸಂದರ್ಭದಲ್ಲಿ ಆಟವಾಡಲು ನೀರಿಗಿಳಿದ ನಾಲ್ಕನೇ ತರಗತಿಯ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಮೃತಪಟ್ಟ ಶಂಕರನಾರಾಯಣ ದಲ್ಲಿ ಘಟನೆ ಬೆಳಕಿಗೆ ಬಂದಿದೆ.

ಮುಹಮ್ಮದ್ ಅರೀಝ್ (10) ಮೃತಪಟ್ಟ ಬಾಲಕ.ಗುರುವಾರ ಮನೆ ಮಂದಿಯೊಂದಿಗೆ ಹೆಂಗವಳ್ಳಿ ಯ ಖಾಸಗಿ ರೆಸಾರ್ಟ್ ಸ್ವಿಮಿಂಗ್ ಫುಲ್ ನ ನೀರಿಗೆ ಬಿದ್ದು ಚಿಂತಾಜನಕ ಸ್ಥಿತಿಯಲ್ಲಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಬಾಲಕ ಮೃತಪಟ್ಟಿದ್ದಾನೆ.

ಬಾಲಕ ಅರೀಝ್ ಸಾವಿಗೆ ರೆಸಾರ್ಟ್ ಅವರ ನಿರ್ಲಕ್ಷ್ಯವೇ ಕಾರಣವೆಂದು ದೂರಿನಲ್ಲಿ ಆರೋಪಿಸಲಾಗಿದೆ.ಲೈಫ್ ಜಾಕೆಟ್, ಲೈಫ್ ಗಾರ್ಡ್ ಇನ್ನಿತರ ಸೂಕ್ತ ವ್ಯವಸ್ಥೆ ಇಲ್ಲದ ಕಾರಣ ಈ ದುರ್ಘಟನೆ ಸಂಭವಿಸಿದೆ ಎಂದು ದೂರಿನಲ್ಲಿ ಕುಟುಂಬಸ್ಥರು ಆರೋಪಿಸಿದ್ದಾರೆ.
ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮೃತ ವಿದ್ಯಾರ್ಥಿನಿ ತಂದೆ, ತಾಯಿ ಅಪಾರ ಬಂಧು ಬಳಗವನ್ನು ಅಗಲಿದ್ದಾನೆ. ಈತ ಹೂಡೆಯ ದಾರುಸ್ಟಲಾಮ್ ಇಂಗ್ಲಿಷ್ ಮೀಡಿಯಂ ಶಾಲೆಯ ವಿದ್ಯಾರ್ಥಿಯಾಗಿದ್ದ ಆಡಳಿತ ಮಂಡಳಿ ಸಂತಾಪ ವ್ಯಕ್ತಪಡಿಸಿದೆ.

You cannot copy content from Baravanige News

Scroll to Top