Tuesday, April 30, 2024
Homeಸುದ್ದಿಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ ದಿನಾಂಕ ಪ್ರಕಟ

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ ದಿನಾಂಕ ಪ್ರಕಟ

ಬೆಂಗಳೂರು : 2024ನೇ ಸಾಲಿನ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ ದಿನಾಂಕ ಪ್ರಕಟವಾಗಿದೆ. ಜೂನ್ 30ರಂದು ಟಿಇಟಿ ಪರೀಕ್ಷೆ ರಾಜ್ಯಾದ್ಯಂತ ನಡೆಯಲಿದೆ. ಆನ್‌ಲೈನ್‌ನಲ್ಲಿ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಶಾಲಾ ಶಿಕ್ಷಣ ಇಲಾಖೆ ಆಯುಕ್ತರ ಕಚೇರಿಯಿಂದ ಆದೇಶ ಹೊರಡಿಸಲಾಗಿದೆ. ಮೇ 15ರಂದು ಟಿಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಕೊನೇ ದಿನವಾಗಿದೆ.

ಅರ್ಹ ಅಭ್ಯರ್ಥಿಗಳು ಅಧಿಸೂಚನೆ ಮತ್ತು ಅಭ್ಯರ್ಥಿಗಳಿಗೆ ನೀಡಲಾದ ಸೂಚನೆಗಳನ್ನು ತಪ್ಪದೇ ಓದಿ ಅರ್ಥೈಸಿಕೊಂಡು, ಅರ್ಜಿಯನ್ನು ಕ್ರಮಬದ್ಧವಾಗಿ ಭರ್ತಿ ಮಾಡಿ ಸಲ್ಲಿಸಲು ಸೂಚಿಸಲಾಗಿದೆ.
ಆನ್‌ಲೈನ್‌ನಲ್ಲಿ ಶಾಲಾ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅರ್ಜಿ ಸಲ್ಲಿಸಲು https://schooleducation.Karnataka.gov.in ನಲ್ಲಿ ಅವಕಾಶವಿದೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News