ಉಡುಪಿ: ಮತದಾನ ಮಾಡಿದ ಕೆಲವೇ ಕ್ಷಣದಲ್ಲಿ ಪ್ರಾಣ ಬಿಟ್ಟ ವೃದ್ದೆ

ಉಡುಪಿ, ಏ.17: ಮನೆಯಲ್ಲಿ ಮತದಾನ ಮಾಡಿದ ವೃದ್ದೆಯೊಬ್ಬರು ಮತದಾನ ಮಾಡಿದ ಕೆಲವೇ ಕ್ಷಣದಲ್ಲಿ ಸಾವನಪ್ಪಿದ ಘಟನೆ ಬ್ರಹ್ಮಾವರ ತಾಲೂಕಿನ ಸಾಸ್ತಾನ ಪಾಂಡೇಶ್ವರ ಚಡಗರ ಅಗ್ರಹಾರದಲ್ಲಿ ನಡೆದಿದೆ.

ಮೃತರನ್ನು ಪಿ.ಯಶೋಧಾ ನಾರಾಯಣ ಉಪಾಧ್ಯ (83) ಎಂದು ಗುರುತಿಸಲಾಗಿದೆ.

ಚುನಾವಣಾ ಆಯೋಗ ವಿಶೇಷ ಚೇತನರು, ಹಿರಿಯ ನಾಗರಿಕರಿಗೆ ಮನೆಯಲ್ಲಿಯೇ ಮತದಾನ ಮಾಡಲು ಅವಕಾಶ ಕಲ್ಪಿಸಿದೆ. ಹೀಗಾಗಿ ನಿವೃತ್ತ ಗ್ರಾಮ ಲೆಕ್ಕಾಧಿಕಾರಿ ದಿ.ನಾರಾಯಣ ಉಪಾಧ್ಯ ಅವರ ಪತ್ನಿ ಪಿ.ಯಶೋಧಾ ಅವರು ಮನೆಯಲ್ಲೆ ಮತದಾನ ಮಾಡಿದರು.

ಮತದಾನದ ದಿನ ಪಿ.ಯಶೋಧಾ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ಆದರೆ ಮತದಾನ ಮಾಡಿ ಆಸ್ಪತ್ರೆ ತೆರಳಲು ಪಿ.ಯಶೋಧಾ ನಿಶ್ಚಯಿಸಿದ್ದರು. ಮತದಾನ ಮಾಡಿದ ಬಳಿಕ ಪಿ.ಯಶೋಧಾ ಅವರನ್ನು ಕೋಟೇಶ್ವರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕ್ಸತ್ಸೆ ಫಲಕಾರಿಯಾಗದೆ ಪಿ.ಯಶೋಧಾ ಅವರು ಮಂಗಳವಾರ ರಾತ್ರಿ 9 ಗಂಟೆ ಸುಮಾರಿಗೆ ಮೃತಪಟ್ಟಿದ್ದಾರೆ.

You cannot copy content from Baravanige News

Scroll to Top