Wednesday, May 22, 2024
Homeಸುದ್ದಿಉಡುಪಿ: ಲಾರಿಯಡಿ ಸಿಲುಕಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತ್ಯು

ಉಡುಪಿ: ಲಾರಿಯಡಿ ಸಿಲುಕಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತ್ಯು

ಉಡುಪಿ, ಏ. 19: ದ್ವಿಚಕ್ರ ವಾಹನ ಸವಾರರೊಬ್ಬರು ಎದುರಿನಿಂದ ಬಂದ ಲಾರಿಯಡಿ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉಡುಪಿ-ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.

ಹೇರೂರು ಮೂಲದ ಕೃಷ್ಣ ಗಾಣಿಗ ಮೃತ ವ್ಯಕ್ತಿ.

ಕೃಷ್ಣ ತನ್ನ ದ್ವಿಚಕ್ರ ವಾಹನದಲ್ಲಿ ಸಂತೆಕಟ್ಟೆಯಿಂದ ಬ್ರಹ್ಮಾವರ ಕಡೆಗೆ ತೆರಳುತ್ತಿದ್ದಾಗ ಈ ಅವಘಡ ನಡೆದಿದೆ. ರಸ್ತೆ ದುರಸ್ತಿ ಕಾಮಗಾರಿ ನಡೆಯುತ್ತಿರುವುದರಿಂದ ಏಕಪಥದಲ್ಲಿ ಸಂಚಾರ ವ್ಯವಸ್ಥೆ ಮಾಡಲಾಗಿದ್ದು, ಕೃಷ್ಣಾ ಎದುರುಗಡೆಯಿಂದ ಬರುತ್ತಿದ್ದ ಲಾರಿಯಡಿಗೆ ಸಿಲುಕಿದ್ದಾರೆ.

ಕೃಷ್ಣ ಅವರು ಉಡುಪಿ ನಗರ ಪಾಲಿಕೆಯಲ್ಲಿ ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಇನ್ನು ಘಟನೆಯಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ಸಂಚಾರ ದಟ್ಟಣೆ ಉಂಟಾಗಿತ್ತು.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News