Home ಸುದ್ದಿ ಶಾಸಕ ಪೂಂಜಾ ಕಾರಿಗೆ ಅಡ್ಡಗಟ್ಟಿ ತಲವಾರು ಹಿಡಿದು, ಅವಾಚ್ಯ ಶಬ್ದಗಳಿಂದ ನಿಂದಿಸಿದ ದುಷ್ಕರ್ಮಿಗಳು!

ಶಾಸಕ ಪೂಂಜಾ ಕಾರಿಗೆ ಅಡ್ಡಗಟ್ಟಿ ತಲವಾರು ಹಿಡಿದು, ಅವಾಚ್ಯ ಶಬ್ದಗಳಿಂದ ನಿಂದಿಸಿದ ದುಷ್ಕರ್ಮಿಗಳು!

ಮಂಗಳೂರು: ದುಷ್ಕರ್ಮಿಗಳ ಗುಂಪೊಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಕಾರಿಗೆ ಅಡ್ಡಗಟ್ಟಿ ತಲವಾರು ಝಳಪಿಸಿದ ಘಟನೆ ಮಂಗಳೂರು ನಗರ ಹೊರವಲಯದ ಫರಂಗಿಪೇಟೆ ಎಂಬಲ್ಲಿ ಗುರುವಾರ ರಾತ್ರಿ ನಡೆದಿದೆ.

ಗುರುವಾರ ರಾತ್ರಿ 11.30ರ ವೇಳೆಗೆ ಘಟನೆ ನಡೆದಿದ್ದು, ಶಾಸಕರು ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಿ ಬೆಳ್ತಂಗಡಿಗೆ ತೆರಳುತ್ತಿದ್ದರು. ತನ್ನ ಕಾರು ಬದಲಾಗಿ ಶಾಸಕರು ತಮ್ಮ ಸಂಬಂಧಿಯೋರ್ವರ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಪಡೀಲ್‌ನಿಂದ ಫರಂಗಿಪೇಟೆಯವರೆಗೆ ದುಷ್ಕರ್ಮಿಗಳು ಕಾರನ್ನು ಬೆನ್ನಟ್ಟಿದ್ದಾರೆ.
ಫರಂಗಿಪೇಟೆಯಲ್ಲಿ ಕಾರು ಸೈಡ್ ಹಾಕುತ್ತಿದ್ದಂತೆಯೇ ದುಷ್ಕರ್ಮಿಗಳು ಅವಾಚ್ಯ ಶಬ್ದಗಳಿಂದ ನಿಂದಿಸಿ ತಲವಾರು ಝಳಪಿಸಿ ಪರಾರಿಯಾಗಿದ್ದಾರೆ. ಈ ಬಗ್ಗೆ ಶಾಸಕ ಪೂಂಜಾ ಕಾರು ಚಾಲಕ ನವೀನ್ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದಾರೆ.

Translate »

You cannot copy content from Baravanige News