Saturday, May 18, 2024
Homeಸುದ್ದಿಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ತಾಕೊಡೆ ಮರ ಇನ್ನಿಲ್ಲ..!

ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ತಾಕೊಡೆ ಮರ ಇನ್ನಿಲ್ಲ..!

ಕಿನ್ನಿಗೋಳಿ: ಸಹಸ್ರಮಾನದ ಇತಿಹಾಸದ ಜೀವಂತ ಸಾಕ್ಷಿಯಾಗಿ ಬೃಹತ್ತಾಗಿ ಬೆಳೆದು ನಿಂತಿದ್ದ ಮೂಲ್ಕಿ ತಾಲೂಕು ಕೊಲ್ಲೂರಿನ ಶ್ರೀ ಕಾಂತಬಾರೆ- ಬೂದ ಬಾರೆ ಜನ್ಮಕ್ಷೇತ್ರದ ತಾಕೊಡೆ ಮರ ಶುಕ್ರವಾರ ಬುಡಸಹಿತ ಧರೆಗುರುಳುವುದರೊಂದಿಗೆ ಇತಿಹಾಸದ ಜೀವಂತ ಸಾಕ್ಷಿಯೊಂದು ಅಂತ್ಯ ಕಂಡಂತಾಗಿದೆ. ಸುಮಾರು 800ರಿಂದ 1,000 ವರ್ಷಗಳ ಹಿನ್ನೆಲೆ ಈ ತಾಕೊಡೆಮರಕ್ಕೆ ಇತ್ತು ಅನ್ನುವುದು ಅಧ್ಯಯನಗಳಿಂದಲೂ ದೃಢಪಟ್ಟಿದೆ.

ಮೂಲ್ಕಿ ಸಾವಂತ ಅರಸರ ದಳವಾಯಿಗಳಾಗಿ ಕಾಂತಬಾರೆ- ಬೂದಬಾರೆಯರು ಇದ್ದರು ಅನ್ನುವುದು ಐತಿಹಾಸಿಕ ಸಾಕ್ಷಿಯಾದರೆ ಈ ಅವಳಿ ವೀರರು ಹುಟ್ಟಿದ್ದು ಇದೇ ತಾಕೊಡೆ ಮರದಡಿಯಲ್ಲಿ ಮತ್ತು ಆಗ ತಾನೆ ಹುಟ್ಟಿದ ಅವಳಿ ಮಕ್ಕಳನ್ನು ನೇಲೆ (ಬಟ್ಟೆಯ ತೊಟ್ಟಿಲು)ಯಲ್ಲಿ ಹಾಕಿ ತೂಗಿದ್ದು ಇದೇ ತಾಕೊಡೆ ಮರದ ಪಡ್ಡಾಯಿ (ಪಡುವಣ-ಪಶ್ಚಿಮ) ಗೆಲ್ಲಿಗೆ ಎನ್ನುತ್ತದೆ ಇತಿಹಾಸ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News