Saturday, May 18, 2024
Homeಸುದ್ದಿಕರಾವಳಿಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ

ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ

ಸುಬ್ರಹ್ಮಣ್ಯ :  ಸಿಡಿಲು ಬಡಿದು ವ್ಯಕ್ತಿಯೋರ್ವರು ಮೃತಪಟ್ಟ ದಾರುಣ ಘಟನೆ ಸುಬ್ರಹ್ಮಣ್ಯದಿಂದ ವರದಿಯಾಗಿದೆ.



ಮೇ.3 ರ ಸಂಜೆ ಘಟನೆ ನಡೆದಿದ್ದು ಸುಬ್ರಹ್ಮಣ್ಯ ಗ್ರಾಮದ ಪರ್ವತಮುಖಿ ನಿವಾಸಿ ಸೋಮಸುಂದರ್ (34) ಮೃತ ಪಟ್ಟವರು.



ಸಂಜೆ ಸುಬ್ರಹ್ಮಣ್ಯ ಪರಿಸರದಲ್ಲಿ ಮಳೆ ಆರಂಭಕ್ಕೂ ಮೊದಲು ಗಾಳಿ, ಗುಡುಗು ಆರಂಭಗೊಂಡಿದ್ದು ಈ ವೇಳೆ ಮನೆಯಂಗಳದಲ್ಲಿ ಒಣಗಿಸಲು ಹಾಕಲಾಗಿದ್ದ ಅಡಿಕೆಯನ್ನು ಸೋಮಸುಂದ‌ರ್ ಅವರು ರಾಶಿ ಮಾಡುವ ವೇಳೆ ಸಿಡಿಲು ಬಡಿದಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದರೂ ಆ ವೇಳೆಗಾಗಲೇ ಅವರು ಮೃತರಾಗಿದ್ದಾರೆ.



ಸೋಮ ಸುಂದ‌ರ್ ಅವರು ಸುಬ್ರಹ್ಮಣ್ಯ ಸಮೀಪದ ಪರ್ವತ ಮುಖಿ ಬಳಿ ದೇವಿಕಾ ಕಾರ್ ವಾಷಿಂಗ್ ಉದ್ಯಮ ನಡೆಸಿಕೊಂಡಿದ್ದು, 10 ದಿನಗಳ ಹಿಂದೆಯಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು ಎನ್ನಲಾಗಿದೆ.

ಮೃತರು ತಾಯಿ, ತಂಗಿ, ಪತ್ನಿಯನ್ನು ಅಗಲಿದ್ದಾರೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News