ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಇಂದು ಮತದಾನ

ನವದೆಹಲಿ, ಮೇ.7: ಲೋಕಸಭಾ ಚುನಾವಣೆಯ ಮೂರನೇ ಹಂತದಲ್ಲಿ ಇಂದು 11 ರಾಜ್ಯಗಳ 92 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಈ ಪೈಕಿ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.

ಮತದಾನ ನಡೆಯುತ್ತಿರುವ 92 ಕ್ಷೇತ್ರಗಳಲ್ಲಿ ಒಟ್ಟು 1,300 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ. 3ನೇ ಹಂತದ ಮತದಾನಕ್ಕೆ ಕೇಂದ್ರ ಚುನಾವಣಾ ಆಯೋಗ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, 1.85 ಲಕ್ಷ ಮತದಾನ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಜೊತೆಗೆ 18.5 ಲಕ್ಷ ಚುನಾವಣಾ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗಿದೆ.

ಇನ್ನು ಕರ್ನಾಟಕದಲ್ಲಿ ಚುನಾವಣೆ ನಡೆಯುತ್ತಿರುವ 14 ಲೋಕಸಭಾ ಕ್ಷೇತ್ರಗಳಲ್ಲಿ ಮಾಜಿ ಸಿಎಂಗಳ, ಹೊಸಮುಖಗಳ, ಸಚಿವರ ಮಕ್ಕಳು ಸ್ಪರ್ಧಿಸುತ್ತಿದ್ದಾರೆ. ಹೀಗಾಗಿ ಈ ಕ್ಷೇತ್ರಗಳು ಭಾರೀ ಕುತೂಹಲ ಮೂಡಿಸಿದೆ.

You cannot copy content from Baravanige News

Scroll to Top