Monday, May 20, 2024
Homeಸುದ್ದಿಮೆಡಿಕಲ್ ಕಾಲೇಜಿನ ಲೇಡಿಸ್ ಟಾಯ್ಲೆಟ್ನಲ್ಲಿ ಮೊಬೈಲ್ ಇಟ್ಟು ಚಿತ್ರೀಕರಣ; ಅಪ್ರಾಪ್ತ ಯುವಕ ಅರೆಸ್ಟ್

ಮೆಡಿಕಲ್ ಕಾಲೇಜಿನ ಲೇಡಿಸ್ ಟಾಯ್ಲೆಟ್ನಲ್ಲಿ ಮೊಬೈಲ್ ಇಟ್ಟು ಚಿತ್ರೀಕರಣ; ಅಪ್ರಾಪ್ತ ಯುವಕ ಅರೆಸ್ಟ್

ಮಂಗಳೂರು: ಮೆಡಿಕಲ್ ಕಾಲೇಜಿನ ಲೇಡಿಸ್ ಟಾಯ್ಲೆಟ್ನಲ್ಲಿ ಮೊಬೈಲ್ ಇಟ್ಟು ಚಿತ್ರೀಕರಣ ಮಾಡಿದಕ್ಕೆ ಪೊಲೀಸರು 17 ವರ್ಷದ ಅಪ್ರಾಪ್ತ ಯುವಕನನ್ನು ಬಂಧಿಸಿದ ಘಟನೆ ಮಂಗಳೂರಿನ ಬಾವುಟಗುಡ್ಡೆಯಲ್ಲಿ ನಡೆದಿದೆ.

ಮೇ.6ರಂದು ಮೆಡಿಕಲ್ ಕಾಲೇಜಿಗೆ ರೋಗಿಯಂತೆ ಬಂದಿದ್ದ ಅಪ್ರಾಪ್ತ ಯುವಕ ಲೇಡಿಸ್ ಟಾಯ್ಲೆಟ್​ಗೆ ಹೋಗಿ ಮೊಬೈಲ್ ಇಟ್ಟಿದ್ದ. ತದನಂತರ ಲೇಡಿಸ್ ಟಾಯ್ಲೆಟ್ ಒಳಗಿನಿಂದ ಮೊಬೈಲ್ ರಿಂಗ್ ಆದ ಸದ್ದು ಕೇಳಿಸಿದ್ದು, ಪರಿಶೀಲನೆ ಮಾಡಿದಾಗ ಮೊಬೈಲ್ ಪತ್ತೆಯಾಗಿದೆ.

ಮೊಬೈಲ್ ಸಿಕ್ಕ ಬಳಿಕ ಕಾಲೇಜು ಸಿಬ್ಬಂದಿ ಬಂದರು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಕಾಲೇಜಿನ ಸಿಸಿಟಿವಿ ಪರಿಶೀಲನೆ ಮಾಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಹದಿನೇಳು ವರ್ಷದ ಅಪ್ರಾಪ್ತ ಯುವಕನನ್ನು ಬಂಧಿಸಿ ಪೊಲೀಸರು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News