ಬೆಳ್ತಂಗಡಿ ಮಾಜಿ ಶಾಸಕ, ಕಾಂಗ್ರೆಸ್ ಮುಖಂಡ ವಸಂತ ಬಂಗೇರ ಇನ್ನಿಲ್ಲ

ಬೆಳ್ತಂಗಡಿ: ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯಲ್ಲಿ ಐದು ಬಾರಿ ಶಾಸಕನಾಗಿ ಆಯ್ಕೆಯಾದ ಕೆ.ವಸಂತ ಬಂಗೇರ (79) ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಕೇದೆ ಸುಬ್ಬ ಪೂಜಾರಿ – ದೇವಕಿ ದಂಪತಿಯ ಪ್ರಥಮ ಪುತ್ರನಾಗಿ 1946ರ ಜನವರಿ 15ರಂದು ಜನಿಸಿದ್ದ ಕೆ.ವಸಂತ ಬಂಗೇರಅವರ ಆರೋಗ್ಯ ಇತ್ತೀಚೆಗೆ ತೀವ್ರವಾಗಿ ಹದಗೆಟ್ಟಿದ್ದು, ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

ಇದೀಗ ಅವರು ಕೊನೆಯುಸಿರೆಳೆದಿದ್ದು, ಮೇ 9ರಂದು ಮುಂಜಾನೆ ಪಾರ್ಥಿವ ಶರೀರ ಬೆಳ್ತಂಗಡಿಗೆ ಆಗಮಿಸುವ ನಿರೀಕ್ಷೆ ಇದೆ.

ಬಳಿಕ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

You cannot copy content from Baravanige News

Scroll to Top