Monday, May 20, 2024
Homeಸುದ್ದಿಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ಉಡುಪಿ ಜಿಲ್ಲೆ ಪ್ರಥಮ, ದ.ಕ ದ್ವಿತೀಯ

ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ಉಡುಪಿ ಜಿಲ್ಲೆ ಪ್ರಥಮ, ದ.ಕ ದ್ವಿತೀಯ

ಬೆಂಗಳೂರು : 2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ 6,31,204 (76.91%) ಫಲಿತಾಂಶ ಸಾಧಿಸಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಜಿಲ್ಲಾವಾರು ಫಲಿತಾಂಶವನ್ನು ಪ್ರಕಟ ಗೊಳಿಸಿದೆ. ಉಡುಪಿ ಜಿಲ್ಲೆ(94%) ಪ್ರಥಮ ಸ್ಥಾನ ಪಡೆದಿದೆ. ದಕ್ಷಿಣ ಕನ್ನಡ ಜಿಲ್ಲೆ (92.12%),ಎರಡನೇ ಸ್ಥಾನ ಹಾಗೂ ಶಿವಮೊಗ್ಗ ಜಿಲ್ಲೆ ಮೂರನೇ ಸ್ಥಾನದಲ್ಲಿದೆ.


ಗ್ರಾಮೀಣ ಮತ್ತು ಸರ್ಕಾರಿ ಶಾಲಾ ಮಕ್ಕಳ ಉತ್ತನ ಸಾಧನೆ ಮಾಡಿದ್ದು, ಬಾಲಕರು – ೨೮೭೪೧೬ ಹಾಗೂ ಬಾಲಕಿಯರು – ೪೨೩೮೨೯ ಪಾಸ್ ಆಗಿದ್ದಾರೆ. ಕರ್ನಾಟಕ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‍ಸೈಟ್‍ karresults.nic.in ನಲ್ಲಿ ಎಸ್‍ಎಸ್‍ಎಲ್‍ಸಿ ಫಲಿತಾಂಶ ವೀಕ್ಷಿಸಬಹುದು.

ಬಾಗಲಕೋಟೆಯ ಮುಧೋಳದ ಮೊರಾರ್ಜಿ ದೇಸಾಯಿ ಶಾಲೆಯ ಅಂಕಿತಾ  ಬಸಪ್ಪ (೬೨೫ ) ಅಂಕ ಪಡೆದು ಪ್ರಥಮ ಸ್ಥಾನ ಪಡೆದಿದ್ದಾರೆ

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News