ಕಾರು ಅಪಘಾತದಲ್ಲಿ ಕಿರುತೆರೆ ನಟಿ ಪವಿತ್ರಾ ಜಯರಾಂ ದುರ್ಮರಣ

ಕನ್ನಡ ಕಿರುತೆರೆ ನಟಿ ಪವಿತ್ರಾ ಜಯರಾಂ ಕಾರು ಅಪಘಾತದಲ್ಲಿ ನಿನ್ನೆ (ಮೇ 12) ಕೊನೆಯುಸಿರೆಳೆದಿದ್ದಾರೆ. ಭೀಕರ ರಸ್ತೆ ಅಪಘಾತದಲ್ಲಿ ನಟಿ ಸಾವನ್ನಪ್ಪಿದ್ದಾರೆ. ಈ ಸಾವಿನ ಸುದ್ದಿ ಕೇಳಿ ಅವರ ಆಪ್ತರಿಗೆ ಶಾಕ್‌ ಆಗಿದ್ದಾರೆ.

ನಟಿ ಪವಿತ್ರಾ ಅವರು ಪ್ರಯಾಣಿಸುತ್ತಿದ್ದ ಕಾರು ನಿನ್ನೆ ಬೆಳಿಗ್ಗೆ ಆಂಧ್ರ ಪ್ರದೇಶದ ಕರ್ನೂಲಿನ ಬಳಿ ಅಪಘಾತಕ್ಕೆ ಈಡಾಗಿದೆ. ಭೀಕರ ಅಪಘಾತದಲ್ಲಿ ನಟಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇದರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ಸಿಗಬೇಕಿದೆ.

ಮೂಲತಃ ಮಂಡ್ಯದವರಾದ ಪವಿತ್ರಾ ಅವರು ರೋಬೋ ಫ್ಯಾಮಿಲಿ, ನೀಲಿ, ರಾಧಾ ರಮಣ, ಜೋಕಾಲಿ ಸೀರಿಯಲ್‌ನಲ್ಲಿ ಪವಿತ್ರಾ ನಟಿಸಿದ್ದರು. ತೆಲುಗಿನ ‘ತ್ರಿನಯನಿ’ ಸೀರಿಯಲ್‌ನಲ್ಲಿ ವಿಲನ್ ಆಗಿ ಪವಿತ್ರಾ ಪ್ರೇಕ್ಷಕರ ಗಮನ ಸೆಳೆದಿದ್ದರು.

You cannot copy content from Baravanige News

Scroll to Top