ಉಡುಪಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ರಘಪತಿ ಭಟ್‌ ನಿರ್ಧಾರ

ಉಡುಪಿ, ಮೇ 13: ವಿಧಾನ ಪರಿಷತ್ ಟಿಕೆಟ್ ಆಕಾಂಕ್ಷಿಯಾಗಿದ್ದು, ಟಿಕೆಟ್‌ ಕೈ ತಪ್ಪಿದ ಬಳಿಕ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದ ಬಿಜೆಪಿ ಮಾಜಿ ಶಾಸಕ ರಘುಪತಿ ಭಟ್ ಅವರು ಇದೀಗ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದೇನೆ ಎಂದು ಹೇಳಿದ್ದಾರೆ.

ನೈರುತ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇ ನೆ ಎಂದು ಉಡುಪಿ ಮಾಜಿ ಶಾಸಕ ರಘುಪತಿ ಭಟ್ ಘೋಷಿಸಿದ್ದಾರೆ. ಬಿಜೆಪಿ ಕಾರ್ಯಕರ್ತರ ಪ್ರತಿನಿಧಿಯಾಗಿ ಸ್ಪರ್ಧೆ ಮಾಡುತ್ತೇನೆ. ಸೋತರೂ ಬಿಜೆಪಿಯಲ್ಲೇ ಇರುತ್ತೇನೆ, ಗೆದ್ದರೂ ಬಿಜೆಪಿಯಲ್ಲೇ ಇರುತ್ತೇನೆ. ಇದು ಯಾವುದೇ ಬಂಡಾಯ ಅಥವಾ ಪಕ್ಷ, ವ್ಯಕ್ತಿ ವಿರುದ್ಧವಲ್ಲ. ನನಗಾಗಿ, ಜನರ ಸೇವೆಗಾಗಿ ಕೆಲಸ ಮಾಡಲು ಈ ನಿರ್ಧಾರ ಮಾಡಿದ್ದೇನೆ ಎಂದು ರಘಪತಿ ಹೇಳಿದ್ದಾರೆ.

ಕರಾವಳಿಗೆ ಪಕ್ಷದಿಂದ ಅನ್ಯಾಯವಾಗಿದೆ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲಿದ್ದೇನೆ. ಅಂದಿನ ಸಿಎಂ ಬೊಮ್ಮಯ್ಯ, ಬಿಜೆಪಿ ಮುಖಂಡರಾದ ಆರ್ ಅಶೋಕ್ ಹಾಗೂ ಇತರರು ನನಗೆ ಈ ಸ್ಥಾನ ನೀಡುವುದಾಗಿ ಭರವಸೆ ನೀಡಿದ್ದರು. ಶಿಕ್ಷಕರ ಸಮುದಾಯ ಮತ್ತು ಪದವೀಧರ ಸಮುದಾಯ ನನಗೆ ಬೆಂಬಲ ನೀಡಿದೆ.
ಸಾಮಾನ್ಯ ಕಾರ್ಯಕರ್ತರಿಗೆ ಟಿಕೆಟ್ ನೀಡಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ನಿಲ್ಲುತ್ತಿರಲಿಲ್ಲ. ಆದರೆ ಹಣ ಬಲ, ಜಾತಿ ಬಲಕ್ಕೆ ಟಿಕೆಟ್ ಸಿಕ್ಕಿದೆ. ಹೀಗಾಗಿ ಜನರೊಂದಿಗೆ ಇದ್ದು ಕೆಲಸ ಮಾಡಲು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆಗೆ ನಿರ್ಧಾರ ಮಾಡಿದ್ದೇನೆ ಎಂದು ಭಟ್ ಹೇಳಿದರು.

ಚಿಹ್ನೆ ಇಲ್ಲದ ಚುನಾವಣೆ ಇದೆ.ಬಿಜೆಪಿ ಪಕ್ಷ ಉಚ್ಛಾಟನೆ ಮಾಡಿದರೂ ನಾನು ಬಿಜೆಪಿ ಕಾರ್ಯಕರ್ತ ನನಗೆ ಬಿ ಫಾರಂ ಕೊಡಿ, ಭೌಗೋಳಿಕವಾಗಿ ಕರಾವಳಿಗೆ ಮಾನ್ಯತೆ ಕೊಡಿ.ಕರಾವಳಿಯನ್ನು ಏನು ಮಾಡಿದರೂ ನಡೆಯುತ್ತದೆ ಎಂಬ ಭಾವನೆ ಬಿಡಲಿ. ಟಿಕೆಟ್ ಘೋಷಣೆ ಬದಲಾವಣೆ ಮಾಡಿ ನನಗೆ ಅವಕಾಶ ಕೊಡಲಿ .ನಾನು ಮೇ16 ನಾಮಪತ್ರ ಸಲ್ಲಿಕೆ ಮಾಡುತ್ತೇನೆ ಎಂದು ಹೇಳಿದರು.

You cannot copy content from Baravanige News

Scroll to Top