Sunday, April 21, 2024
Homeಸುದ್ದಿಕೇದಾರನಾಥ: ಭಕ್ತರನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಪತನ- 7 ಮಂದಿ ಸಾವು

ಕೇದಾರನಾಥ: ಭಕ್ತರನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಪತನ- 7 ಮಂದಿ ಸಾವು

ಡೆಹ್ರಾಡೂನ್: ಉತ್ತರಾಖಂಡದಲ್ಲಿನ ಕೇದಾರನಾಥ ದೇಗುಲಕ್ಕೆ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಪತನಗೊಂಡಿದ್ದು, ಪೈಲಟ್‌ ಸೇರಿದಂತೆ 7 ಮಂದಿ ಸಾವನ್ನಪ್ಪಿರುವ ದುರಂತ ಮಂಗಳವಾರ ನಡೆದಿದೆ.

ಕೇದಾರನಾಥ್ ದೇವಸ್ಥಾನದಿಂದ 2 ಕಿ.ಮೀ ದೂರದಲ್ಲಿ ಈ ದುರಂತ ನಡೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಹೆಲಿಕಾಪ್ಟರ್​ನಲ್ಲಿ 8 ಜನರು ಪ್ರಯಾಣಿಸುತ್ತಿದ್ದರು ಎಂದು ಮೂಲಗಳಿಂದ ತಿಳಿದುಬಂದಿದೆ. 8 ಮಂದಿ ಪೈಕಿ ಪೈಲಟ್ ಸೇರಿ 7 ಮಂದಿ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆಂದು ಮಾಹಿತಿ ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಎನ್​ಡಿಆರ್​ಎಫ್​, ಪೊಲೀಸರು ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಹೆಲಿಕಾಪ್ಟರ್​ ದುರಂತಕ್ಕೆ ಕಾರಣ ತಿಳಿದುಬಂದಿಲ್ಲ.

RELATED ARTICLES

LEAVE A REPLY

Please enter your comment!
Please enter your name here

- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News