ಉಡುಪಿ: ಸ್ನಾನ ಮಾಡಲೆಂದು ಬಚ್ಚಲು ಮನೆ ಬಳಿ ನಿಂತಿದ್ದ ವೇಳೆ ಸಿಡಿಲು ಬಡಿದು ಯುವಕನೋರ್ವ ಮೃತಪಟ್ಟ ಘಟನೆ ಶಿರ್ವ ಮಾಣಿಬೆಟ್ಟು ಬಳಿ ನಡೆದಿದೆ.
ಶಿರ್ವ ಎಂಎಸ್‌ಆರ್ ಎಸ್ ಕಾಲೇಜಿನ ಎರಡನೇ ವರ್ಷದ ಬಿಸಿಎ ವಿದ್ಯಾರ್ಥಿ, ಶಿರ್ವ ಮಾಣಿಬೆಟ್ಟು ತೋಟದಮನೆ ನಿವಾಸಿ ರಮೇಶ್ ಪೂಜಾರಿಯವರ ಪುತ್ರ ರಕ್ಷಿತ್ ಪೂಜಾರಿ (20) ಮೃತ ಯುವಕ.
ರಕ್ಷಿತ್ ನಿನ್ನೆ ಸಂಜೆ ಸ್ನಾನ ಮಾಡಲು ಬಚ್ಚಲು ಮನೆಯ ಬಳಿ ನಿಂತಿದ್ದ ವೇಳೆ ಸಿಡಿಲು ಬಡಿದಿದೆ. ನೆಲದಲ್ಲಿ ಬಿದ್ದಿದ್ದ ಅವರನ್ನು ಮನೆ ಮಂದಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ಕೊನೆಯುಸಿರೆಳೆದಿದ್ದಾರೆ.