Saturday, June 15, 2024
Homeಸುದ್ದಿಕರಾವಳಿಉಡುಪಿಯಲ್ಲಿ ಗ್ಯಾಂಗ್ ವಾರ್ : ಸಿನಿಮೀಯಾ ಶೈಲಿಯಲ್ಲಿ ಕಾರುಗಳ ಡಿಕ್ಕಿ ಹೊಡೆಸಿ ಹೊಡೆದಾಟ: ವೀಡಿಯೋ ವೈರಲ್

ಉಡುಪಿಯಲ್ಲಿ ಗ್ಯಾಂಗ್ ವಾರ್ : ಸಿನಿಮೀಯಾ ಶೈಲಿಯಲ್ಲಿ ಕಾರುಗಳ ಡಿಕ್ಕಿ ಹೊಡೆಸಿ ಹೊಡೆದಾಟ: ವೀಡಿಯೋ ವೈರಲ್

ಉಡುಪಿ : ಎರಡು ತಂಡಗಳ ನಡುವೆ ಗ್ಯಾಂಗ್ ವಾರ್ ನಡೆದ ಘಟನೆ ಉಡುಪಿಯ ಕುಂಜಿಬೆಟ್ಟುವಿನಲ್ಲಿ ನಡೆದ ಬಗ್ಗೆ ವರದಿಯಾಗಿದೆ.

ಕಾಪು ಮೂಲದ ಎರಡು ತಂಡಗಳ ಯುವಕರು ಉಡುಪಿ – ಮಣಿಪಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರುಗಳಲ್ಲಿ ಬಂದು‌ ಜಗಳ ಮಾಡಿಕೊಂಡು ಕಾರಿನಲ್ಲಿಯೇ ಹೊಡೆದಾಡಿದ್ದಾರೆ.

ಮೇ.18 ರಂದು ಉಡುಪಿ ಕುಂಜಿಬೆಟ್ಟುವಿನಲ್ಲಿ ನಡೆದಿರುವ ಈ ಘಟನೆ ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಆರೋಪಿಗಳಿಗೆ ಜೂನ್ 1 ರವರೆಗೆ‌ ನ್ಯಾಯಂಗ ಬಂಧನ ವಿಧಿಸಿದ್ದಾರೆ.

ಮೂಲಗಳ ಪ್ರಕಾರ, ಈ ಎರಡು ಗ್ಯಾಂಗ್‌ಗಳ ಮಧ್ಯೆ ಕಾರು ಮಾರಾಟಕ್ಕೆ ಸಂಬಂಧಿಸಿದಂತೆ ವಿವಾದವಿತ್ತು ಎನ್ನಲಾಗಿದೆ. ಉಡುಪಿ ನಗರ‌ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News