Saturday, July 27, 2024
Homeಸುದ್ದಿಮಂಗಳೂರಿನ ಕಂಕನಾಡಿಯಲ್ಲಿ ನಡು ರಸ್ತೆಯಲ್ಲಿ ನಮಾಜ್

ಮಂಗಳೂರಿನ ಕಂಕನಾಡಿಯಲ್ಲಿ ನಡು ರಸ್ತೆಯಲ್ಲಿ ನಮಾಜ್

ಮಂಗಳೂರು : ಇತ್ತೀಚಿಗೆ ಬೆಂಗಳೂರಿನಲ್ಲಿ ನಡುರಸ್ತೆಯಲ್ಲಿ ನಮಾಜ್ ​ಮಾಡುತ್ತಿದ್ದ ಭಾವಚಿತ್ರ ಎಲ್ಲಡೆ ಹರದಾಡಿತ್ತು. ಇದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಮಂಗಳೂರಿನ ಕಂಕನಾಡಿಯಲ್ಲಿ ನಡು ರಸ್ತೆಯಲ್ಲೇ ನಮಾಜ್ ಮಾಡಿದ್ದಾರೆ. ಕಳೆದ ಶುಕ್ರವಾರ ಘಟನೆ ನಡೆದಿದ್ದು, ನಮಾಜ್​ ಮಾಡಿದ ವೀಡಿಯೋ ಎಲ್ಲೆಡೆ ಹರಿದಾಡುತ್ತಿದೆ.

ಕಂಕನಾಡಿಯಲ್ಲಿನ ಮಸೀದಿ ಮುಂದೆ ಇರುವ ರಸ್ತೆಯಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡಿದ್ದಾರೆ. ಇದರಿಂದ ವಾಹನ ಸವಾರರಿಗೆ ತೊಂದರೆಯಾಗಿದೆ. ನಡು ರಸ್ತೆಯಲ್ಲಿ ನಮಾಜ್​​ ಮಾಡುತ್ತಿದ್ದರಿಂದ ವಾಹನ ಸವಾರರು ಯೂಟರ್ನ್ ತೆಗೆದುಕೊಂಡು ಹೋಗಿದ್ದಾರೆ. ಕದ್ರಿ​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಮಾಜ್​ ಮಾಡಿದ್ದನ್ನು ಮೊಬೈಲ್​ನಲ್ಲಿ ಸೆರೆಹಿಡಿಯಲಾಗಿದ್ದು, ಅಸಮಧಾನ ವ್ಯಕ್ತವಾಗಿದೆ.

ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗುತ್ತಿದ್ದು, ಪರ-ವಿರೋಧದ ಚರ್ಚೆ ನಡೆಯುತ್ತಿದೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News