Home ಸುದ್ದಿ ನ.11 ರಂದು ರಿಷಬ್ ಶೆಟ್ಟಿ ಜೊತೆ ಕಾಂತಾರ ವೀಕ್ಷಿಸಲಿರುವ ಪ್ರಧಾನಿ ಮೋದಿ?

ನ.11 ರಂದು ರಿಷಬ್ ಶೆಟ್ಟಿ ಜೊತೆ ಕಾಂತಾರ ವೀಕ್ಷಿಸಲಿರುವ ಪ್ರಧಾನಿ ಮೋದಿ?

ಬೆಂಗಳೂರು ಅ.19 : ಕನ್ನಡದ ಕಾಂತರ ಚಿತ್ರ ಇದೀಗ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಭರ್ಜರಿ ಯಶಸ್ಸು ಕಾಣುತ್ತಿದೆ. ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಕಾಂತರ ಚಿತ್ರ ದೇಶದಾದ್ಯಂತ ಅಪಾರ ಜನರ ಮೆಚ್ಚುಗೆಗೆ ಪಾತ್ರವಾಗಿದೆ.

ಇದೀಗ ನ.11 ರಂದು ಬೆಂಗಳೂರಿಗೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ನಟ ರಿಷಬ್ ಶೆಟ್ಟಿ ಅವರೊಂದಿಗೆ ಕಾಂತಾರ ಚಿತ್ರವನ್ನು ವೀಕ್ಷಿಸಲಿದ್ದಾರೆ ಎಂಬ ಸುದ್ದಿಯೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.

ವಿವಿಧ ಕಾಮಗಾರಿಗಳನ್ನು ಲೋಕಾರ್ಪಣೆಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಅವರು ನ.11 ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ಅಂದು ಅವರು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯಲ್ಲಿ 108 ಅಡಿ ಎತ್ತರದ ಕೆಂಪೇಗೌಡ ಅವರ ಕಂಚಿನ ಪ್ರತಿಮೆಯನ್ನು ಉದ್ಘಾಟಿಸಲಿದ್ದಾರೆ ಎಂದು ತಿಳಿದು ಬಂದಿದೆ.

Translate »

You cannot copy content from Baravanige News