ಭಾರಿ ಮಳೆ ಹಿನ್ನೆಲೆ: ಜುಲೈ 09 (ನಾಳೆ) ಉಡುಪಿ ಜಿಲ್ಲಾ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ, ಜು 08: ಜಿಲ್ಲೆಯಾದ್ಯಂತ ತೀವ್ರವಾಗಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಅವರು ಜುಲೈ 09 ರಂದು ಜಿಲ್ಲೆಯ ಎಲ್ಲಾ ಶಾಲಾ, ಪಿಯುಸಿ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.

ಉಡುಪಿಯಲ್ಲಿ ಜು.9 ರಂದು ಬಾರೀ ಮಳೆಯಾಗುವ ಹಿನ್ನಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿರುವುದರಿಂದ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಎಂಜಿನಿಯರಿಂಗ್ ಕಾಲೇಜುಗಳು, ಡಿಪ್ಲೊಮಾ ಕಾಲೇಜುಗಳು, ಐಟಿಐ ಮತ್ತು ಸ್ನಾತಕೋತ್ತರ ಕೋರ್ಸ್‌ಗಳು ಎಂದಿನಂತೆ ಕಾರ್ಯನಿರ್ವಹಿಸಲಿದೆ.

Scroll to Top