Thursday, April 18, 2024
Homeಸುದ್ದಿಪಡುಬಿದ್ರಿ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಪಡುಬಿದ್ರಿ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಕಾಪು: ವಿಪ್ರೋ ಕಂಪೆನಿಯ ಉದ್ಯೋಗಿಯಾಗಿದ್ದ ಪಡುಬಿದ್ರಿಯ ಬ್ರಹ್ಮಸ್ಥಾನ ಬಳಿ ವಾಸವಿದ್ದ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಸೌಜನ್ಯ (22) ಎನ್ನಲಾಗಿದೆ.ಸೌಜನ್ಯ ಬೆಂಗಳೂರಿನ ವಿಪ್ರೊ ಕಂಪೆನಿಗಾಗಿ ದುಡಿಯುತ್ತಿದ್ದು, ಕೊರೊನಾದಿಂದಾಗಿ ಕಳೆದ 10 ತಿಂಗಳುಗಳಿಂದ ಈಕೆ ಮನೆಯಿಂದಲೇ ಕೆಲಸ ಮಾಡಿಕೊಂಡಿದ್ದರು. ತನ್ನ ತಂದೆ ತಾಯಿ ಇಬ್ಬರೂ ಸುರತ್ಕಲ್‍ಗೆ ಹೋಗಿದ್ದ ಸಂದರ್ಭದಲ್ಲಿ ಮನೆಯಲ್ಲಿ ತಾನು ಕೆಲಸ ಮಾಡಿಕೊಂಡಿದ್ದ ಕೋಣೆಯಲ್ಲೇ ಈ ಕೃತ್ಯವೆಸಗಿದ್ದಾರೆ ಎಂದು ತಿಳಿದು ಬಂದಿದೆ.ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣವು ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News