ಮಂಗಳೂರು : ನಡು ರಸ್ತೆಯಲ್ಲೇ ಹೊಡೆದಾಡಿಕೊಂಡ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳು!

ಮಂಗಳೂರು : ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳ ಗುಂಪು ನಡು ರಸ್ತೆಯಲ್ಲೇ ಹೊಡೆದಾಡಿಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಮಂಗಳೂರಿನ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳ ಗುಂಪು ಕಾಲೇಜಿನ ಗೇಟ್ ಮುಂಭಾಗದ ರಸ್ತೆಯಲ್ಲಿ ಹೊಡೆದಾಡಿಕೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ವೈರಲ್ ಆಗಿದೆ.

ಕ್ಷುಲ್ಲಕ ಕಾರಣಕ್ಕಾಗಿ ಗಲಾಟೆ ನಡೆದಿದ್ದು, ಕಾಲೇಜು ಯೂನಿಫಾರಂನಲ್ಲೇ ವಿದ್ಯಾರ್ಥಿಗಳು ಹೊಡೆದಾಡಿಕೊಂಡಿದ್ದಾರೆ.

Scroll to Top