ಉಡುಪಿ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಜಯಕರ ಸುವರ್ಣ ನಿಧನ

ಉಡುಪಿ, ಆ. 06: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ, ದೂರದರ್ಶನದ ಉಡುಪಿ ವರದಿಗಾರ ಕಲ್ಮಾಡಿ ನಿವಾಸಿ ಜಯಕರ ಸುವರ್ಣ (67) ಆ. 5ರಂದು ಹೃದಯಾಘಾತದಿಂದ ನಿಧನ ಹೊಂದಿದರು.

ಮೃತರು ಪತ್ನಿ, ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಸೌತ್‌ ಕೆನರಾ ಫೋಟೋಗ್ರಾಫ‌ರ್ಸ್‌ ಅಸೋಸಿಯೇಶನ್‌ ಉಪಾಧ್ಯಕ್ಷರೂ ಆಗಿದ್ದ ಅವರು ಹಲವಾರು ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದರು.

ಕಲ್ಮಾಡಿ ಮನೆಯಲ್ಲಿ ಇವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ನಡೆಯಲಿದ್ದು, ಇಂದೇ ಅಂತ್ಯಕ್ರಿಯೆ ನಡೆಯಲಿದೆ.

Scroll to Top