ಕಾಪು: “ಕಾಪು ತಾಲ್ಲೂಕು ಮಟ್ಟದ 78 ನೇ ಸ್ವಾತಂತ್ರೋತ್ಸವ” ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.
ಕಾಪು ತಹಶೀಲ್ದಾರರಾದ ಪ್ರತೀಭಾ ಆರ್ ಅವರು ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳಾದ ಜೇಮ್ಸ್ ಡಿಸಿಲ್ವ, ಕಾಪು ಪುರಸಭೆಯ ಮುಖ್ಯಾಧಿಕಾರಿ ನಾಗರಾಜ್, ಕಾಪು ವೃತ್ತ ನಿರೀಕ್ಷಕರಾದ ಜಯಶ್ರೀ ಮಾನೆ, ಕಾಪು ಪೋಲಿಸ್ ಉಪ ನಿರೀಕ್ಷಕರಾದ ಖಾದರ್, ಕಾಪು ತಾಲೂಕು ಯುವಜನ ಸಬಲೀಕರಣ ಅಧಿಕಾರಿಗಳಾದ ರಿತೇಶ್, ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರಾದ ಗೋಪಾಲಕೃಷ್ಣ ಗಾವಂಸ್ಕರ್, ಕನ್ನಡ ಸಾಹಿತ್ಯ ಪರಿಷತ್ ಕಾಪು ತಾಲೂಕು ಅಧ್ಯಕ್ಷರಾದ ಪುಂಡಲೀಕ ಮರಾಠ ಹಾಗೂ ಕಾಪು ಪುರಸಭೆಯ ಸದಸ್ಯರು ಮತ್ತು ಕಾಪು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.