Monday, April 22, 2024
Homeಸುದ್ದಿ'ಸಿದ್ದರಾಮಯ್ಯನವರೇ ನೀವು ಎಲ್ಲೇ ಚುನಾವಣೆಗೆ ನಿಂತರೂ ಸೋಲಿಸುತ್ತೇವೆ' - ಸಿದ್ದುಗೆ ನಳಿನ್ ಸವಾಲ್

‘ಸಿದ್ದರಾಮಯ್ಯನವರೇ ನೀವು ಎಲ್ಲೇ ಚುನಾವಣೆಗೆ ನಿಂತರೂ ಸೋಲಿಸುತ್ತೇವೆ’ – ಸಿದ್ದುಗೆ ನಳಿನ್ ಸವಾಲ್

ಮೈಸೂರು: ‘ಸಿದ್ರಾಮಣ್ಣ ನಿಮ್ಮನ್ನು ನಿರುದ್ಯೋಗಿ ಮಾಡಲು ನಾವು ಬದ್ಧರಾಗಿದ್ದು ನೀವು ಎಲ್ಲೇ ಚುನಾವಣೆಗೆ ನಿಂತರೂ ನಿಮ್ಮನ್ನು ಸೋಲಿಸಿಯೇ ಸಿದ್ಧ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ಹೇಳಿದ್ದಾರೆ.

ಶ್ರೀರಂಗಪಟ್ಟಣದಲ್ಲಿ ಇಂದು ಜನಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ರಾಜ್ಯದಲ್ಲಿ ಜನನಾಯಕ, ಖಳ ನಾಯಕ ಮತ್ತು ಕಣ್ಣೀರ ನಾಯಕ ಎಂಬ 3 ಮಾದರಿಯ ನಾಯಕರಿದ್ದಾರೆ. ರಾಜ್ಯಕ್ಕೆ ಅಗತ್ಯವಿಲ್ಲದ ಟಿಪ್ಪು ಜಯಂತಿ ಮಾಡಿ, ಹಿಂದೂ ಮುಸ್ಲಿಮರನ್ನು ಒಡೆದು ಹಾಕಿ, ಜನರ ಹತ್ಯೆಗೆ ಕಾರಣರಾದವರು ಸಿದ್ರಾಮಣ್ಣ. ರಾಜ್ಯದಲ್ಲಿ 24 ಹಿಂದೂ ಕಾರ್ಯಕರ್ತರ ಹತ್ಯೆ ನಡೆದ ಕಣ್ಣೀರು ಹಾಕದ ನಾಯಕ ಸಿದ್ರಾಮಣ್ಣ. ಆದರೆ ಇವತ್ತು ಮೋದಿ ಸರ್ಕಾರ ಪಿಎಫ್‍ಐ ನಿಷೇಧಿಸಿ ಮತಾಂಧರನ್ನು ಜೈಲಿಗಟ್ಟುವ ಕಾರ್ಯ ಮಾಡಿದಾಗ ಇದನ್ನು ಪ್ರಶ್ನಿಸಿದವರು ‘ಖಳನಾಯಕ ಸಿದ್ದರಾಮಯ್ಯ’ .

ಅಧಿಕಾರ ಇಲ್ಲದಾಗ ಕುಮಾರಣ್ಣ ಕಣ್ಣೀರು ಹಾಕಿ ಸ್ಥಾನಗಳನ್ನು ಗೆಲ್ಲುವಂತೆ ಮಾಡಿದವರು. ಸಿದ್ರಾಮಣ್ಣ ಮತ್ತು ಕುಮಾರಣ್ಣ 2018ರಲ್ಲಿ ಅಧಿಕಾರಕ್ಕಾಗಿ ಅನೈತಿಕ ಸಂಬಂಧ ಮಾಡಿ ಸರ್ಕಾರ ನಡೆಸಿದರು ಎಂದು ಟೀಕಿಸಿದರು.ಆದರೆ ಸಂಧ್ಯಾ ಸುರಕ್ಷಾ, ಭಾಗ್ಯಲಕ್ಷ್ಮಿ, ಶಾಲಾ ಮಕ್ಕಳಿಗೆ ಸೈಕಲ್ ವಿತರಿಸಿ, ಹಾಲಿಗೆ ಬೆಂಬಲ ಬೆಲೆ ಮತ್ತಿತರ ಜನಪರ ಯೋಜನೆಗಳ ಮೂಲಕ ಜನರ ಕಣ್ಣೀರನ್ನು ಒರೆಸಿದವರು ಯಡಿಯೂರಪ್ಪನವರು. ಇವರು ಜನನಾಯಕರಾಗಿದ್ದರು ಎಂದು ಕಟೀಲ್ ಹೇಳಿದ್ದಾರೆ

RELATED ARTICLES

LEAVE A REPLY

Please enter your comment!
Please enter your name here

- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News