Thursday, February 29, 2024
Homeಸುದ್ದಿಕಾಪು: ಗುಜರಿ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ ! ಮೂವರ ಸಾವು, ಮೂವರ ಸ್ಥಿತಿ ಗಂಭೀರ

ಕಾಪು: ಗುಜರಿ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ ! ಮೂವರ ಸಾವು, ಮೂವರ ಸ್ಥಿತಿ ಗಂಭೀರ

ಕಾಪುವಿನ ಮಲ್ಲಾರುವಿನಲ್ಲಿರುವ ಗುಜರಿ ಅಂಗಡಿಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮೂವರು ಸಾವನ್ನಪ್ಪಿದ ಘಟನೆ ಇಂದು ಬೆಳಗ್ಗೆ ನಡೆದಿದೆ. 

ಅಂಗಡಿಯ ಪಾಲುದಾರರಾದ ಚಂದ್ರನಗರದ ರಜಬ್ ಹಾಗೂ ರಜಾಕ್‌ ಮಲ್ಲಾರ್‌ ಮೃತಪಟ್ಟವರು. ಅವಘಡದಲ್ಲಿ ಇನ್ನೋರ್ವ ಪಾಲುದಾರ ಹಸನಬ್ಬ ಹಾಗೂ ಅವಘಡದ ಮಾಹಿತಿ ತಿಳಿದು ಬೆಂಕಿ ನಂದಿಸುವಕಾರ್ಯಾಚರಣೆಯಲ್ಲಿ ಭಾಗಿಯಾಗಲು ತೆರಳಿದ್ದ ಬೆಳಪು ಗ್ರಾಪಂ ಸದಸ್ಯ ಫಹೀಮ್ ಸೇರಿದಂತೆ ಮೂವರು ಗಂಭೀರ ಗಾಯಗೊಂಡಿದ್ದು , ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಗುಜರಿ ಅಂಗಡಿಯಲ್ಲಿ ಇರಿಸಲಾದ ಹಳೆಯ ಪ್ರಿಜ್ ಸೇರಿದಂತೆ ಗುಜರಿ ಸಾಮಗ್ರಿಗಳು ಬೆಂಕಿಯ ಕೆನ್ನಾಲಗೆಗೆ ಸಿಲುಕಿ ಸುಟ್ಟು ಕರಕಲಾಗಿದ್ದು,  ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳು ಬೆಂಕಿಗಾಹುತಿಯಾಗಿವೆ.

ಅಂಗಡಿಯಲ್ಲಿ ಗುಜರಿಗೆ ಬಂದಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಅವಘಡ ಸಂಭವಿಸಿದೆ ಎನ್ನಲಾಗಿದೆ. ಸ್ಫೋಟದ ತೀವ್ರತೆಗೆ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ. 

ಸ್ಥಳಕ್ಕೆ  ಉಡುಪಿ ಅಗ್ನಿಶಾಮಕ ದಳದ ತಂಡ ಎರಡು ವಾಹನಗಳಲ್ಲಿ ಧಾವಿಸಿ ಬೆಂಕಿ ನಂದಿಸುವ ಕಾರ್ಯ ಕೈಗೊಂಡಿದ್ದಾರೆ.

ಗ್ರಾಪಂ ಸದಸ್ಯ ಗಂಭೀರ

ಅವಘಡದ ಮಾಹಿತಿ ತಿಳಿದು ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ಭಾಗಿಯಾಗಲು ತೆರಳಿದ್ದ ಬೆಳಪು ಗ್ರಾಪಂ ಸದಸ್ಯ ಫಹೀಮ್ ಬೆಳಪು ಗಂಭೀರವಾಗಿ ಗಾಯಗೊಂಡಿದ್ದಾರೆ

ಕಾರ್ಯಾಚರಣೆ ವೇಳೆ ಬೆಂಕಿಗೆ ಹಳೆ ಫ್ರಿಡ್ಜ್ ಸ್ಪೋಟಗೊಂಡಿದ್ದರಿಂದ ಫಹೀಮ್ ಅವರಿಗೆ ತ್ರೀವತರದ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಅವರು ಮಣಿಪಾಲ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News