Thursday, April 18, 2024
Homeಸುದ್ದಿವಿವಿಧ ಇಲಾಖಾ ಅಧಿಕಾರಿಗಳ ಜೊತೆ ಶಿರ್ವ ಗ್ರಾಮ ಪಂಚಾಯತ್ ಗ್ರಾಮ ಸಭೆ.

ವಿವಿಧ ಇಲಾಖಾ ಅಧಿಕಾರಿಗಳ ಜೊತೆ ಶಿರ್ವ ಗ್ರಾಮ ಪಂಚಾಯತ್ ಗ್ರಾಮ ಸಭೆ.

ಉಡುಪಿ: ಶಿರ್ವ ಗ್ರಾಮ ಪಂಚಾಯತ್ ನ ಗ್ರಾಮ ಸಭೆಯು ದಿನಾಂಕ 25.03.2022 ಶುಕ್ರವಾರ ಬೆಳಿಗ್ಗೆ 10.30 ಕ್ಕೆ ಶಿರ್ವ ಮಹಿಳಾ ಸೌಧದಲ್ಲಿ ನಡೆಯಲಿದೆ. ಈ ಸಭೆಯಲ್ಲಿ ವಿವಿಧ ಇಲಾಖಾ ಅಧಿಕಾರಿಗಳು ಭಾಗವಹಿಸಲಿದ್ದು ಇಲಾಖಾ ಮಾಹಿತಿಯನ್ನು ನೀಡಲಿದ್ದಾರೆ.

ಶಿರ್ವ ಗ್ರಾಮದ ಗ್ರಾಮಸ್ಥರು ತಮ್ಮ ಅರ್ಜಿ ಅಹವಾಲುಗಳನ್ನು ನೀಡಲು ಅವಕಾಶವಿದ್ದು, ಶಿರ್ವ ಗ್ರಾಮ ಪಂಚಾಯತ್ ವ್ಯಾಪ್ತಿಯ ಪ್ರತೀ ಮನೆಯ ಕನಿಷ್ಠ ಒರ್ವರಾದರೂ ಈ ಗ್ರಾಮಸಭೆಯಲ್ಲಿ ಭಾಗವಹಿಸಬೇಕಾಗಿ ಕೋರಲಾಗಿದೆ.

ಗ್ರಾಮ ಸಭೆಯಲ್ಲಿ ಭಾಗವಹಿಸಿ ಗ್ರಾಮದ ಅಭಿವೃದ್ದಿಗೆ ಸಲಹೆ ಸೂಚನೆಗಳನ್ನು ನೀಡಿ, ಗ್ರಾಮದ ಅಭಿವೃದ್ದಿಯಲ್ಲಿ ತಾವೂ ಪಾಲುದಾರರಾಗಬೇಕಾಗಿ ಶಿರ್ವ ಗ್ರಾಮ ಪಂಚಾಯತ್‌ ಅಧ್ಯಕ್ಷರಾದ ಕೆ ಆರ್ ಪಾಟ್ಕರ್ ಅಧ್ಯಕ್ಷರು, ಅನಂತಪದ್ಮನಾಭ ನಾಯಕ್ (ಪಂ.ಅಭಿವೃದ್ದಿ ಅಧಿಕಾರಿ) ಹಾಗೂ ಉಪಾಧ್ಯಕ್ಷರು, ಎಲ್ಲಾ ಸದಸ್ಯರು ಮತ್ತು ಸಿಬ್ಬಂಧಿವರ್ಗದವರ ಪರವಾಗಿ ಮನವಿ ಮಾಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News